ಸುರೇಶ್ ರೈನಾ 
ಕ್ರಿಕೆಟ್

ಐಪಿಎಲ್ 2020: ಸಿಎಸ್ ಕೆ ತಂಡಕ್ಕೆ ಮರಳಲಿದ್ದಾರೆ ರೈನಾ

ವೈಯಕ್ತಿಕ ಕಾರಣಗಳಿಂದಾಗಿ ಯುಎಇಯಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ವಾಪಸ್ಸಾಗಿದ್ದ ಕ್ರಿಕೆಟಿಗ ಸುರೇಶ್ ರೈನಾ ತಂಡಕ್ಕೆ ಮರಳುವ ಸಾಧ್ಯತೆ ಇದೆ.

ವೈಯಕ್ತಿಕ ಕಾರಣಗಳಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ವಾಪಸ್ಸಾಗಿದ್ದ ಕ್ರಿಕೆಟಿಗ ಸುರೇಶ್ ರೈನಾ ತಂಡಕ್ಕೆ ಮರಳುವ ಸಾಧ್ಯತೆ ಇದೆ.

ಈ ಬಗ್ಗೆ ಸಿಎಸ್ ಕೆ ತಂಡದ ವಿಕೆಟ್ ಕೀಪರ್ ದೀಪ್ ದಾಸ್ ಗುಪ್ತಾ ಮಾತನಾಡಿದ್ದು ರೈನಾ ತಂಡಕ್ಕೆ ಮರಳುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಸಿಎಸ್ ಕೆ ರೈನಾ ಹಾಗೂ ಹರ್ಭಜನ್ ಸಿಂಗ್ ಗೆ ಇನ್ನೂ ಬದಲಿ ಆಟಗಾರರನ್ನು ಘೋಷಿಸಬೇಕಿದ್ದು, ರೈನಾ ಯುಎಇ ಗೆ ವಾಪಸ್ಸಾಗಲಿದ್ದಾರೆ ಎಂದು ಹೇಳಿದ್ದಾರೆ. 

ಟೂರ್ನಮೆಂಟ್ ನ ಹಿಸ್ಟರಿಯಲ್ಲಿ ರೈನಾ ಅತಿ ಹೆಚ್ಚು ರನ್ ಗಳಿಸಿದ್ದು, 2020 ರ ವೈಯಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದರು.

ಈ ಇಬ್ಬರೂ ಆಟಗಾರರಿಗೆ ಬದಲಿ ಆಟಗಾರರನ್ನು ಘೋಷಿಸದೇ ಇದ್ದರೂ ಅಚ್ಚರಿಯೇನಿಲ್ಲ ಎನ್ನುತ್ತಾರೆ ದೀಪ್ ದಾಸ್ ಗುಪ್ತ.

ರೈನಾ ತಂಡಕ್ಕೆ ಮರಳಲಿದ್ದಾರೆ ಎಂದು ನನಗನಿಸುತ್ತದೆ. ಕ್ವಾರಂಟೈನ್ ಕಾರಣದಿಂದಾಗಿ ಕೆಲವೊಂದು ಪಂದ್ಯಗಳನ್ನು ಅವರು ತಪ್ಪಿಸಿಕೊಂಡರೂ ಸಹ ಅವರು ಸಿಎಸ್ ಕೆ ಪರ ಆಡಲಿದ್ದಾರೆ ಎಂದು ಇಎಸ್ ಪಿಎನ್ ಕ್ರಿಕ್ ಇನ್ಫೋಗೆ ದೀಪ್ ದಾಸ್ ಗುಪ್ತಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್