ಸಿಎಸ್ ಕೆ ತಂಡ 
ಕ್ರಿಕೆಟ್

ಐಪಿಎಲ್ 2020: ಭರ್ಜರಿ 5 ವಿಕೆಟ್ ಗಳಿಂದ ಹಾಲಿ ಚಾಂಪಿಯನ್ ಬಗ್ಗುಬಡಿದ ಚೆನ್ನೈ ಸೂಪರ್ ಕಿಂಗ್ಸ್ 

 ಕೊರೋನಾ ಆತಂಕದ ನಡುವೆಯೂ ಇಲ್ಲಿನ ಇಲ್ಲಿನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ಐಪಿಎಲ್ 2020 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಐದು ವಿಕೆಟ್ ಗಳಿಂದ ಸೋಲಿಸಿದ ಚೆನ್ನೆ ಸೂಪರ್ ಕಿಂಗ್ಸ್ ತಂಡ ಗೆಲುವಿನ ನಗೆ ಬೀರಿದೆ.

ಅಬುದಾಬಿ: ಕೊರೋನಾ ಆತಂಕದ ನಡುವೆಯೂ ಇಲ್ಲಿನ ಇಲ್ಲಿನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2020 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಐದು ವಿಕೆಟ್ ಗಳಿಂದ ಸೋಲಿಸಿದ ಚೆನ್ನೆ ಸೂಪರ್ ಕಿಂಗ್ಸ್ ತಂಡ ಗೆಲುವಿನ ನಗೆ ಬೀರಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಒವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು.  ಮುಂಬೈ ಇಂಡಿಯನ್ಸ್ ಪರ ಸೌರಭ್ ತಿವಾರಿ 42, ಕ್ವಿಂಟನ್ ಡಿ ಕಾಕ್ 33, ಕೀರನ್ ಪೊಲಾರ್ಡ್ 18 ರನ್ ಗಳಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಬೌಲಿಂಗ್ ಮಾಡಿದ ಲುಂಗಿ ಎನ್ಗಿಡಿ 4 ಓವರ್ ಗಳಲ್ಲಿ 38 ರನ್ ಗಳಿಗೆ 3 ವಿಕೆಟ್ ಪಡೆದರೆ, ದೀಪಕ್ ಚಹರ್, 4 ಓವರ್ ಗಳಲ್ಲಿ 32 ರನ್ ಗಳಿಗೆ 2  ವಿಕೆಟ್ ಹಾಗೂ ರವೀಂದ್ರ ಜಡೇಜಾ 4 ಓವರ್ ಗಳಲ್ಲಿ  42 ರನ್ ನೀಡಿ 2 ವಿಕೆಟ್ ಪಡೆದುಕೊಂಡರು.

ಮುಂಬೈ ಇಂಡಿಯನ್ಸ್ ನೀಡಿದ 162 ರನ್ ಗಳ ಗುರಿ ಬೆನ್ನತ್ತಿದ್ದ  ಸೂಪರ್ ಕಿಂಗ್ಸ್ ತಂಡ 19.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 166 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿತು. ಚೆನ್ನೈ ಸೂಪರ್ ಕಿಂಗ್ಸ್ ಪರ ಅಂಬಟಿ ರಾಯುಡು ಆಕರ್ಷಕ 71, ಪಾಫ್ ಡು ಪ್ಲೆಸ್ಸಿಸ್ 58, ಸ್ಯಾಮ್ ಕರನ್ 18ರನ್ ಗಳಿಸಿದರು.

ಮುಂಬೈ ಇಂಡಿಯನ್ಸ್ ಪರ ಟ್ರೆಂಟ್ ಬೌಲ್ಟ್ ಹಾಗೂ ಜೇಮ್ಸ್ ಪ್ಯಾಟಿನ್ಸನ್  ಹಾಗೂ ರಾಹುಲ್ ಚಹರ್ ತಲಾ ಒಂದೊಂದು ವಿಕೆಟ್ ಗಳನ್ನು ಪಡೆದುಕೊಂಡರು. ಅಂಬಟಿ ರಾಯುಡು ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!