ಸೌರವ್ ಗಂಗೂಲಿ - ದೇವದತ್ತ ಪಡಿಕಲ್ 
ಕ್ರಿಕೆಟ್

ದೇವದತ್ತ ಪಡಿಕ್ಕಲ್ ಬ್ಯಾಟಿಂಗ್ ನೋಡಿ ಖುಷಿ ಆಯಿತು: ಸೌರವ್ ಗಂಗೂಲಿ

ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದೇವದತ್ತ ಪಡಿಕ್ಕಲ್ ಅವರನ್ನು ಶ್ಲಾಘಿಸಿದ್ದಾರೆ.

ದುಬೈ: ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದೇವದತ್ತ ಪಡಿಕ್ಕಲ್ ಅವರನ್ನು ಶ್ಲಾಘಿಸಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಪಡಿಕ್ಕಲ್ ಅವರ ಅದ್ಭುತ ಇನ್ನಿಂಗ್ಸ್ ಅನ್ನು ನೋಡಿದ್ದು ಸಂತೋಷ ನೀಡಿದೆ ಎಂದು ಹೇಳಿದ್ದಾರೆ.

ಐಪಿಎಲ್ ಚೊಚ್ಚಲ ಪಂದ್ಯದಲ್ಲಿ ಎಂಟು ಬೌಂಡರಿಗಳೊಂದಿಗೆ 42 ಎಸೆತಗಳಲ್ಲಿ 56 ರನ್ ಗಳಿಸಿದ ಪಡಿಕ್ಕಲ್ ಎಲ್ಲರನ್ನು ಅಚ್ಚರಿಗೊಳಿಸಿದರು. ಅವರು ಏರಾನ್ ಫಿಂಚ್ ಅವರೊಂದಿಗೆ ಬೆಂಗಳೂರಿಗೆ ಬಲವಾದ ಆರಂಭವನ್ನು ನೀಡಿದರು.

"ಪಡಿಕ್ಕಲ್ ಅವರ ಶ್ರೇಷ್ಠ ಇನ್ನಿಂಗ್ಸ್ ನೋಡಿ ಸಂತೋಷವಾಯಿತು. ಎಡಗೈ ಬ್ಯಾಟ್ಸ್‌ಮನ್ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದಾರೆ” ಎಂದು ಗಂಗೂಲಿ ಟ್ವೀಟ್ ಮಾಡಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕ ಪರ ಆಡಿದ ಪಡಿಕ್ಕಲ್, 2019-20ರ ಕ್ರೀಡಾ ಋತುವಿನಲ್ಲಿ ವಿಜಯ್ ಹಜಾರೆ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪಡಿಕ್ಕಲ್ 2018 ರಲ್ಲಿ ಪ್ರಥಮ ದರ್ಜೆ ಪ್ರವೇಶ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video