ಕ್ರಿಕೆಟ್

ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ದಾಖಲೆ ಮೇಲೆ ದಾಖಲೆ ಬರೆದ ಕನ್ನಡಿಗ ಕೆ.ಎಲ್. ರಾಹುಲ್!

Nagaraja AB

ಅಬುದಾಬಿ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ, ಕನ್ನಡಿಗ  ಕೆ.ಎಲ್. ರಾಹುಲ್  ಶತಕ ಗಳಿಸಿದ್ದಾರೆ.  ಈ ಮೂಲಕ 13ನೇ ಆವೃತ್ತಿಯ ಟೂರ್ನಿಯಲ್ಲಿ ಶತಕ ಗಳಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾದರು. ಕೆ.ಎಲ್. ರಾಹುಲ್ 64 ಎಸೆತಗಳಲ್ಲಿ ಶತಕ ಸಿಡಿಸಿದರು.

ಇದಕ್ಕೂ ಮುನ್ನ ಐಪಿಎಲ್ ನಲ್ಲಿ 2 ಸಾವಿರ ರನ್ ಗಳನ್ನು ವೇಗವಾಗಿ ತಲುಪಿದ ಆಟಗಾರನಾಗಿ ಹೊರಹೊಮ್ಮುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅವರ ಎಂಟು ವರ್ಷಗಳ ಹಳೆಯದಾದ ದಾಖಲೆಯನ್ನು ಅಳಿಸಿ ಹಾಕಿದರು.

ಕೆಎಲ್ ರಾಹುಲ್ 60 ಇನ್ನಿಂಗ್ಸ್ ಗಳಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದರು. ಮಾಜಿ ಮುಂಬೈ ಇಂಡಿಯನ್ಸ್ ಆಟಗಾರ ಸಚಿನ್ ತೆಂಡೊಲ್ಕರ್ 63 ಇನ್ನಿಂಗ್ಸ್ ಗಳಲ್ಲಿ 2000 ರನ್ ಗಳನ್ನು ಕಲೆ ಹಾಕಿದ್ದರು. ಕೆ.ಎಲ್ ರಾಹುಲ್  69 ಎಸೆತಗಳಲ್ಲಿ 14 ಬೌಂಡರಿ, 7 ಸಿಕ್ಸರ್ ಸಹಾಯದಿಂದ ಅಜೇಯ 132 ರನ್ ಬಾರಿಸಿದರು.

SCROLL FOR NEXT