ಬೆನ್ ಸ್ಟೋಕ್ಸ್ 
ಕ್ರಿಕೆಟ್

ಕೈಗೆ ಗಾಯದಿಂದ ರಾಜಸ್ಥಾನ್ ರಾಯಲ್ಸ್‌ನ ಬೆನ್ ಸ್ಟೋಕ್ಸ್ ಐಪಿಎಲ್ ನಿಂದ ಹೊರಕ್ಕೆ!

ಪಂಜಾಬ್ ಕಿಂಗ್ಸ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಕೈಗೆ ಗಾಯ ಮಾಡಿಕೊಂಡಿರುವ ಇಂಗ್ಲೆಂಡ್ ನ ಆಲ್ ರೌಂಡರ್   ಬೆನ್ ಸ್ಟೋಕ್ಸ್‌  ಪ್ರಸಕ್ತ ಆವೃತ್ತಿಯ ಐಪಿಎಲ್ ನಿಂದ ಹೊರ ಬಿದಿದ್ದಾರೆ.  ಪ್ರಾಂಚೈಸಿ ರಾಜಸ್ಥಾನ ರಾಯಲ್ಸ್ ಮಂಗಳವಾರ ಈ ವಿಷಯವನ್ನು ಖಚಿತಪಡಿಸಿದೆ. ಆದಾಗ್ಯೂ, ಸ್ಟೋಕ್ಸ್  ಇಂಗ್ಲೆಂಡ್ ಗೆ ತೆರಳುವ ಮುನ್ನ ಭಾರತದಲ್ಲಿಯೇ ಒಂದು ವಾರ ಉಳಿಯಲಿದ್ದಾರೆ.

ಮುಂಬೈ: ಪಂಜಾಬ್ ಕಿಂಗ್ಸ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಕೈಗೆ ಗಾಯ ಮಾಡಿಕೊಂಡಿರುವ ಇಂಗ್ಲೆಂಡ್ ನ ಆಲ್ ರೌಂಡರ್   ಬೆನ್ ಸ್ಟೋಕ್ಸ್‌  ಪ್ರಸಕ್ತ ಆವೃತ್ತಿಯ ಐಪಿಎಲ್ ನಿಂದ ಹೊರ ಬಿದಿದ್ದಾರೆ.  ಪ್ರಾಂಚೈಸಿ ರಾಜಸ್ಥಾನ ರಾಯಲ್ಸ್ ಮಂಗಳವಾರ ಈ ವಿಷಯವನ್ನು ಖಚಿತಪಡಿಸಿದೆ. ಆದಾಗ್ಯೂ, ಸ್ಟೋಕ್ಸ್  ಇಂಗ್ಲೆಂಡ್ ಗೆ ತೆರಳುವ ಮುನ್ನ ಭಾರತದಲ್ಲಿಯೇ ಒಂದು ವಾರ ಉಳಿಯಲಿದ್ದಾರೆ.

ಮುಂಬೈನಲ್ಲಿ ಸೋಮವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆಯಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಲ್ ರೌಂಡರ್ ಬೇನ್ ಸ್ಟೋಕ್ಸ್ ಅವರ ಎಡಗೈ ಗಾಯಗೊಂಡಿರುವುದಾಗಿ ಬ್ರಿಟಿಷ್ ಮಾಧ್ಯಮಗಳಲ್ಲಿ ವರದಿ ಬಂದ ನಂತರ ರಾಯಲ್ಸ್ ಪ್ರಾಂಚೈಸಿ ಹೇಳಿಕೆಯಲ್ಲಿ ತಿಳಿಸಿದೆ. 

ನಂತರ ನಡೆಸಲಾದ ತನಿಖೆಯಲ್ಲಿ ಅವರ ಕೈ ಬೆರಳು ಮುರಿದಿರುವುದು ತಿಳಿದುಬಂದಿದೆ. ಇದರಿಂದಾಗಿ ದುರದೃಷ್ಟವಶಾತ್ ಅವರು ಪ್ರಸಕ್ತ ಆವೃತ್ತಿಯ ಐಪಿಎಲ್ ನಿಂದ ಹೊರಗೆ ಉಳಿಯಬೇಕಾಗಿದೆ.  ಕೈ ಶಸ್ತ್ರಚಿಕಿತ್ಸೆಯಿಂದಾಗಿ ಜೋಫ್ರಾ ಆರ್ಚರ್ ಅವರನ್ನು ಕಳೆದುಕೊಂಡಿರುವ ರಾಜಸ್ಥಾನ ರಾಯಲ್ಸ್ ಗೆ ಇದೀಗ ಬೆನ್ ಸ್ಟೋಕ್ಸ್ ಅವರು ಐಪಿಎಲ್ ನಿಂದ ಹೊರಗೆ ಉಳಿದಿರುವುದು ಮತ್ತೊಂದು ಹೊಡೆತ ನೀಡಿದ್ದಂತಾಗಿದೆ. 

ಬೆನ್ ರಾಯಲ್ಸ್ ಕುಟುಂಬದ ಮೌಲ್ಯವರ್ಧಿತ ಸದಸ್ಯ , ದೊಡ್ಡ ಆಸ್ತಿ ಎಂಬುದು ರಾಜಸ್ಥಾನ ರಾಯಲ್ಸ್ ತಂಡದ ಪ್ರತಿಯೊಬ್ಬರಿಗೂ ಗೊತ್ತಿದ್ದು, ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಉಳಿದಿರುವ ಪಂದ್ಯಗಳಿಗಾಗಿ ಪರ್ಯಾಯ ಆಟಗಾರನ್ನು ಆಯ್ಕೆ ಮಾಡಲು ಪರಿಶೀಲಿಸುವುದಾಗಿ ರಾಜಸ್ಥಾನ ರಾಯಲ್ಸ್ ಪ್ರಾಂಚೈಸಿ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್