ಮುಂಬೈ ಇಂಡಿಯನ್ಸ್ 
ಕ್ರಿಕೆಟ್

ಐಪಿಎಲ್ 2021: ಕೆಕೆಆರ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 10 ರನ್ ಗಳ ರೋಚಕ ಗೆಲುವು

ಇಲ್ಲಿನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 14ನೇ ಆವೃತ್ತಿಯ ಐದನೇ ಪಂದ್ಯದಲ್ಲಿ  ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 10 ರನ್ ಗಳ ಅಂತರದಿಂದ  ಮುಂಬೈ ಇಂಡಿಯನ್ಸ್  ಗೆಲುವು ಸಾಧಿಸಿದೆ.

ಚೆನ್ನೈ: ಇಲ್ಲಿನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 14ನೇ ಆವೃತ್ತಿಯ ಐದನೇ ಪಂದ್ಯದಲ್ಲಿ  ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 10 ರನ್ ಗಳ ಅಂತರದಿಂದ  ಮುಂಬೈ ಇಂಡಿಯನ್ಸ್  ಗೆಲುವು ಸಾಧಿಸಿದೆ.

ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಮಾಡಲು ನಿರ್ಧರಿಸಿದ್ದರಿಂದ ಮೊದಲಿಗೆ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 152 ರನ್ ಕಲೆ ಹಾಕಿತು. ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ ಆಕರ್ಷಕ 56, ರೋಹಿತ್ ಶರ್ಮಾ, 43, ಕೃನಾಲ್ ಪಾಂಡ್ಯ 15 ರನ್ ಗಳಿಸಿದರು. ಕೆಕೆಆರ್ ಪರ ಆಂಡ್ರೆ ರಸೆಲ್ 5, ಪ್ಯಾಟ್ ಕಮ್ಮಿನ್ಸ್ 2, ಶಾಕಿಬ್ ಅಲ್ ಹಸನ್ 1 ವಿಕೆಟ್ ಪಡೆದರು.

ಮುಂಬೈ ಇಂಡಿಯನ್ಸ್ ನೀಡಿದ್ದ 153 ರನ್ ಗಳ ಗುರಿ ಬೆನ್ನತ್ತಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಆರಂಭಿಕರಾದ ನಿತೀಶ್ ರಾಣಾ 57 ಹಾಗೂ ಶುಭ್ ಮನ್ ಗಿಲ್ 33 ರನ್  ಕಲೆಹಾಕುವ ಮೂಲಕ ಉತ್ತಮ ಆರಂಭ ನೀಡಿದರು.ಬಿರುಸಿನ ಆಟಕ್ಕೆ ಮುಂದಾದ ಶುಭ್ ಮನ್ ಗಿಲ್ 33 ರನ್ ಗಳಿಸಿದಾಗ ರಾಹುಲ್  ಚಹರ್ ಎಸೆತದಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆ ನಿರ್ಗಮಿಸಿದರು. ಇದರ ಬೆನ್ನಲ್ಲೇ ರಾಹುಲ್ ತ್ರಿಪಾಠಿ ಕೂಡಾ ಕೀಪರ್ ಗೆ ಕ್ಯಾಚ್ ನೀಡಿ ಹೊರ ನಡೆದರು.

ಇನ್ನೂ ತಂಡದ ಮೊತ್ತ 122 ರನ್ ಆಗಿದ್ದ ವೇಳೆ ನಿತೀಶ್ ರಾಣಾ ಸ್ಟಂಪ್ ಔಟ್ ಆದರು. ಇದರ ಬೆನ್ನಲ್ಲೇ ಶಕೀಬ್ ಅಲ್ ಹಸನ್ ಕೂಡಾ ನಿರ್ಗಮಿಸಿದರು. ಹೀಗೆ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 142 ರನ್ ಗಳಿಸಲಷ್ಟೇ ಶಕ್ತವಾಯಿತು. ಪರಿಣಾಮ ಮುಂಬೈ ಇಂಡಿಯನ್ಸ್ 10 ರನ್ ಗಳಿಂದ ಗೆಲುವಿನ ನಗೆ ಬೀರಿತು.

ಮುಂಬೈ ಇಂಡಿಯನ್ಸ್ ಪರ ರಾಹುಲ್ ಚಹರ್ 4 ವಿಕೆಟ್ ಕಬಳಿಸಿ ಮಿಂಚಿದರೆ, ಟ್ರೆಂಟ್ ಬೌಲ್ಟ್ 2, ಕೃನಾಲ್ ಪಾಂಡ್ಯ 1 ವಿಕೆಟ್ ಪಡೆದರು. ರಾಹುಲ್ ಚಹರ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ