ವಿರಾಟ್ ಕೊಹ್ಲಿ-ಬಾಬರ್ ಅಜಂ 
ಕ್ರಿಕೆಟ್

ಕೊಹ್ಲಿ ಹಿಂದಿಕ್ಕಿದ ಪಾಕ್ ನ ಬಾಬರ್ ಅಜಂ: ಐಸಿಸಿ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ!

ಐಸಿಸಿ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಪಾಕಿಸ್ತಾನದ ನಾಯಕ ಬಾಬರ್ ಅಜಂ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

ದುಬೈ: ಐಸಿಸಿ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಪಾಕಿಸ್ತಾನದ ನಾಯಕ ಬಾಬರ್ ಅಜಂ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ. 

ಐಸಿಸಿ ನೂತನವಾಗಿ ಬಿಡುಗಡೆ ಮಾಡಿರುವ ಏಕದಿನ ಕ್ರಿಕೆಟ್ ಬ್ಯಾಟ್ಸ್ ಮನ್ ಪಟ್ಟಿಯಲ್ಲಿ ಬಾಬರ್ ಅಜಂ 865 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದಾರೆ. ಇನ್ನು 1,258 ದಿನಗಳ ಕಾಲ ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿದ್ದ ಕೊಹ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. 

ದಕ್ಷಿಣ ಆಫ್ರಿಕಾದ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಬಾಬರ್ ಅಜಂ 228 ರನ್ ಬಾರಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 

ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ  825 ಅಂಕಗಳೊಂದಿಗೆ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. ನಾಲ್ಕನೇ ಮತ್ತು ಐದನೇ ಸ್ಥಾನದಲ್ಲಿ ರಾಸ್ ಟೇಲರ್ ಮತ್ತು ಆರೋನ್ ಪಿಂಚ್ ಇದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಯುದ್ಧದ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ

ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!

ಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ಸೀತಾರಾಮನ್

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

SCROLL FOR NEXT