ರಾಜಸ್ಥಾನ ರಾಯಲ್ಸ್ 
ಕ್ರಿಕೆಟ್

ಐಪಿಎಲ್ 2021: ಮಿಲ್ಲರ್, ಮೋರಿಸ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧರಾಜಸ್ಥಾನ ಮೂರು ವಿಕೆಟ್ ಗೆಲುವು

ಇಲ್ಲಿನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಡೇವಿಡ್ ಮಿಲ್ಲರ್ ಹಾಗೂ ಕ್ರಿಸ್ ಮೋರಿಸ್ ಅವರ ನೆರವಿನಿಂದ ರಾಜಸ್ಥಾನ ರಾಯಲ್ಸ್ ಮೂರು ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿದೆ.

ಮುಂಬೈ: ಇಲ್ಲಿನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಡೇವಿಡ್ ಮಿಲ್ಲರ್ ಹಾಗೂ ಕ್ರಿಸ್ ಮೋರಿಸ್ ಅವರ ನೆರವಿನಿಂದ  ರಾಜಸ್ಥಾನ ರಾಯಲ್ಸ್  ಮೂರು ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿತು. ಟಾಮ್ ಕರ್ರನ್ 21, ಲಲಿತ್ ಯಾದವ್ 20 ರನ್ ಗಳಿಸಿದರು. ರಾಜಸ್ಥಾನ್ ರಾಯಲ್ಸ್ ಪರ ಜಯದೇವ್ ಉನದ್ಕತ್ 3, ಮುಸ್ತಫಿಜುರ್ ರಹಮಾನ್ 2, ಕ್ರಿಸ್ ಮೋರಿಸ್ 1 ವಿಕೆಟ್ ಪಡೆದರು.

ಡೆಲ್ಲಿ ಕಾಪಿಟಲ್ಸ್ ನೀಡಿದ 148 ರನ್ ಗುರಿ ಬೆನ್ನಟ್ಟಿದ್ದ ರಾಜಸ್ಥಾನ ರಾಯಲ್ಸ್, 17 ರನ್ ಗಳಿಸುವುದರಲ್ಲಿ ಮನನ್ ವೋಹ್ರಾ, ಜೋಸ್ ಬಟ್ಲರ್ , ಸಂಜು ಸ್ಯಾಮನ್ಸ್, ಶಿವಮ್ ದುಬೆ, ಅವರನ್ನು ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜೊತೆಗೂಡಿದ ಡೇವಿಡ್ ಮಿಲ್ಲರ್ ಹಾಗುೂ ರಾಹುಲ್ ತೆವಾತಿಯಾ ತಂಡವನ್ನು ಮುನ್ನಡೆಸಿದರು. ಈ ಜೋಡಿ ಬೇರ್ಪಟ್ಟ ನಂತರ ಮತ್ತೆ ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಎಂಟನೇ ವಿಕೆಟ್ ಗೆ ಜೊತೆಯಾದ ಜೈದೇವ್ ಉನಾದ್ಕಟ್ ಹಾಗೂ ಕ್ರಿಸ್ ಮೋರಿಸ್  ಪಂದ್ಯ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಮೋರಿಸ್ ಕೇವಲ 18 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ನೆರವಿನಿಂದ 36 ರನ್ ಗಳಿಸಿದರೆ, ಜೈದೇವ್ ಉನಾದ್ಕಟ್ 11 ರನ್ ಗಳಿಸುವುದರೊಂದಿಗೆ ರಾಜಸ್ಥಾನ ರಾಯಲ್ಸ್ 19.4 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 150 ರನ್ ಗಳಿಸುವ ಮೂಲಕ ಭರ್ಜರಿ ಜಯಭೇರಿ ಬಾರಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!