ಸಿಎಸ್ ಕೆ 
ಕ್ರಿಕೆಟ್

ಐಪಿಎಲ್‌ನಲ್ಲಿ ಸತತ 3ನೇ ಗೆಲುವು ದಾಖಲಿಸಿದ ಧೋನಿ ಪಡೆ: ಆರ್‌ಸಿಬಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಸಿಎಸ್‌ಕೆ!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯಲ್ಲಿ ಸತತ ಮೂರನೇ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರ್‌ಸಿಬಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯಲ್ಲಿ ಸತತ ಮೂರನೇ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರ್‌ಸಿಬಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

ಮುಂಬೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ನಿಗದಿತ ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 220 ರನ್ ಬಾರಿಸಿತ್ತು. 

ಚೆನ್ನೈ ನೀಡಿದ 221 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಕೋಲ್ಕತ್ತಾ 202 ರನ್ ಗೆ ಆಲೌಟ್ ಆಗಿದ್ದು 18 ರನ್ ಗಳಿಂದ ಚೆನ್ನೈಗೆ ಶರಣಾಗಿದೆ. 

ಚೆನ್ನೈ ಪರ ರುತುರಾಜ್ ಗಾಯಕ್ವಾಡ್ 64, ಡುಪ್ಲೆಸಿಸ್ ಅಜೇಯ 95, ಮೊಯಿನ್ ಅಲಿ 25, ಎಂಎಸ್ ಧೋನಿ 17 ರನ್ ಬಾರಿಸಿದ್ದಾರೆ. 

ಕೋಲ್ಕತ್ತಾ ನೈಟ್ ರೈಡರ್ಸ್ ಪರ ದಿನೇಶ್ ಕಾರ್ತಿಕ್ 40, ಅಂಡ್ರೆ ರಸೆಲ್ 54 ಮತ್ತು ಪ್ಯಾಟ್ ಕಮೀನ್ಸ್ ಅಜೇಯ 66 ರನ್ ಗಳಿಸಿದ್ದಾರೆ.

2021ರ ಐಪಿಎಲ್ ಟೂರ್ನಿಯಲ್ಲಿ 4 ಪಂದ್ಯಗಳ ಪೈಕಿ 3 ಪಂದ್ಯ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ಅಂಕ ಸಂಪಾದಿಸಿದೆ. ಇನ್ನು ಆರ್ ಸಿಬಿ ಸಹ ಮೂರು ಪಂದ್ಯ ಗೆದ್ದು 6 ಅಂಕ ಸಂಪಾದಿಸಿದ್ದರೂ ಚೆನ್ನೈ ರನ್ ರೇಟ್ ನಿಂದಾಗಿ ಅಗ್ರಸ್ಥಾನಕ್ಕೇರಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ