ಐಪಿಎಲ್ 2021: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 9 ವಿಕೆಟ್ ಜಯ
ಐಪಿಎಲ್ 2021 ನ 14ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 9 ವಿಕೆಟ್ ಗಳ ಜಯ ದಾಖಲಿಸಿದೆ.
ಚೆನ್ನೈ: ಐಪಿಎಲ್ 2021 ನ 14ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 9 ವಿಕೆಟ್ ಗಳ ಜಯ ದಾಖಲಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ ತನ್ನೆಲಾ ವಿಕೆಟ್ ಕಳೆದುಕೊಂಡು 120 ರನ್ ಸಾಧಾರಣ ಮೊತ್ತ ಕಲೆ ಹಾಕಿತ್ತು.
ಜಾನಿ ಬೆಸ್ಟ್ರೋ (63), ಡೇವಿಡ್ ವಾರ್ನರ್ (37) ಅವರುಗಳ ನೆರವಿನಿಂದ ಹೈದರಾಬಾದ್ 18.4 ಓವರ್ ಗಳಲ್ಲಿ ಗುರಿ ತಲುಪಿ ಜಯದ ನಗು ಬೀರಿತು.
ಪಂಜಾಬ್ ಪರ ಅಲೆನ್ ಒಂದು ವಿಕೆಟ್ ಪಡೆದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.