ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಗೆ 12 ಲಕ್ಷ ರೂಪಾಯಿ ದಂಡ!
ಮುಂಬೈ ಇಂಡಿಯನ್ಸ್ ನ ನಾಯಕ ರೋಹಿತ್ ಶರ್ಮಾಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಕಾರಣದಿಂದಾಗಿ ರೋಹಿತ್ ಶರ್ಮಾಗೆ ದಂಡ ವಿಧಿಸಲಾಗಿದೆ.
ಚೆನ್ನೈ: ಮುಂಬೈ ಇಂಡಿಯನ್ಸ್ ನ ನಾಯಕ ರೋಹಿತ್ ಶರ್ಮಾಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಕಾರಣದಿಂದಾಗಿ ರೋಹಿತ್ ಶರ್ಮಾಗೆ ದಂಡ ವಿಧಿಸಲಾಗಿದೆ.
ಅನುಭವಿ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ (4/24) ಬೌಲಿಂಗ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್ ತಂಡ 9 ವಿಕೆಟ್ ಗಳ ನಷ್ಟಕ್ಕೆ 137 ರನ್ ಗಳಿಸಿತ್ತು.
ಚೆನ್ನೈ ನ ಚಿದಂಬರಂ ಸ್ಟೇಡಿಯಂ ನಲ್ಲಿ ನಡೆದ ಪಂಡ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ಅವರ ತಂಡ ನಿಧಾನಗತಿಯಲ್ಲಿ ಆಡಿದ್ದಕ್ಕಾಗಿ 12 ಲಕ್ಷ ದಂಡ ವಿಧಿಸಲಾಗಿದೆ" ಎಂದು ಐಪಿಎಲ್ ಹೇಳಿಕೆ ಬಿಡುಗಡೆ ಮಾಡಿದೆ.
ಈ ಐಪಿಎಲ್ ಸೀಸನ್ ನಲ್ಲಿ ಇದು ತಂಡದ ಮೊದಲ ತಪ್ಪಾಗಿರುವುದರಿಂದ ಶರ್ಮಾ ಅವರಿಗೆ 12 ಲಕ್ಷ ರೂಪಾಯಿಗಳ ದಂಡ ವಿಧಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ಐಪಿಎಲ್ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.