ವೇದಾ ಕೃಷ್ಣಮೂರ್ತಿ (ಇನ್ ಸ್ಟಾಗ್ರಾಮ್ ಚಿತ್ರ) 
ಕ್ರಿಕೆಟ್

ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ತಾಯಿ ಕೋವಿಡ್-19 ಗೆ ಬಲಿ

ಕರ್ನಾಟಕದ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ತಾಯಿ ಕೋವಿಡ್-19ಗೆ ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಚಿಕ್ಕಮಗಳೂರು: ಕರ್ನಾಟಕದ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ತಾಯಿ ಕೋವಿಡ್-19ಗೆ ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಪತ್ರಿಕೆಯೊಂದು ವರದಿ ಮಾಡಿದ್ದು, ವೇದಾ ಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬದೇವಿ (67 ವರ್ಷ) ಅವರು ಕಡೂರಿನ ಚೇತನ್ ನರ್ಸಿಂಗ್ ಹೋಮ್ ನಲ್ಲಿ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಇದೇ ಏಪ್ರಿಲ್ 20ರಂದು ಅವರಿಗೆ ಸೋಂಕು ದೃಢಪಟ್ಟಿತ್ತು ಎಂದು ಹೇಳಲಾಗಿದೆ.

ಮನೆಯಲ್ಲಿ ನಿಗಾ ವ್ಯವಸ್ಥೆಯಲ್ಲಿ ಇದ್ದ ಚೆಲುವಾಂಬ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದ ಹಿನ್ನಲೆಯಲ್ಲಿ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಉಸಿರಾಟದ ಸಮಸ್ಯೆಯಾಗಿ ಮೃತಪಟ್ಟರು. ಬೀರೂರು ಮಾರ್ಗದಲ್ಲಿನ ತೋಟದಲ್ಲಿ ಶನಿವಾರ ಅಂತ್ಯಕ್ರಿಯೆ ನೆರವೇರಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!