ಚೆನ್ನೈ ಸೂಪರ್ ಕಿಂಗ್ಸ್ ಗೆ 69 ರನ್ ಗೆಲುವು 
ಕ್ರಿಕೆಟ್

ಐಪಿಎಲ್ ಟ್ವೆಂಟಿ-20: ಆರ್‌ಸಿಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 69 ರನ್ ಗೆಲುವು 

ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು  ವಿರುದ್ಧ  69 ರನ್ ಗಳಿಂದ ಗೆಲುವು ಸಾಧಿಸಿದೆ.

ಮುಂಬೈ: ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು  ವಿರುದ್ಧ  69 ರನ್ ಗಳಿಂದ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ್ದ ಚೆನ್ನೈ ರವೀಂದ್ರ ಜಡೇಜಾ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ  191 ರನ್ ಗಳ ಬೃಹತ್ ಮೊತ್ತ ಪೇರಿಸಿತು.

ಗೆಲುವಿಗೆ 192 ರನ್ ಗಳ ಗುರಿಯನ್ನು ಬೆನ್ನಟ್ಟಿದ ಬೆಂಗಳೂರು ತಂಡದ ಪರ ಕನ್ನ್ಡಿಗ ಪಡಿಕ್ಕಲ್ (34) ಹಾಗೂ ಮ್ಯಾಕ್ಸ್ ವೆಲ್ (22) ಮಾತ್ರವೇ ತುಸು ಉತ್ತಮ ಪ್ರದರ್ಶನ ನೀಡಿದ್ದ ಹೊರತು ಉಳಿದಾರೂ ಇಪ್ಪತ್ತು ರನ್ ಗಡಿ ತಲುಪಲಿಲ್ಲ.

ನಾಯಕ ಕೊಹ್ಲಿ (8), ವಾಷಿಂಗ್ಟನ್ ಸುಂದರ್ (7), ಎಬಿಡಿ (4) ಸೇರಿ ಪ್ರಮುಖರೆಲ್ಲಾ ಒಂದಂಕಿಗಳನ್ನು ದಾಟುವಷ್ಟರಲ್ಲೇ ಪೆವಿಲಿಯನ್ ಸೇರಿದ್ದರು. ಈ ಮೂಲಕ ಬೆಂಗಳೂರು ಇಪ್ಪತ್ತು ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 122 ರನ್ ಗಳಿಸುವಷ್ಟಕ್ಕೆ ತೃಪ್ತಿಪಟ್ಟಿದೆ. ಈ ಮೂಲಕ ಸಿಎಸ್ ಕೆ ತಂಡ ಐಪಿಎಲ್ ನಲ್ಲಿ ಬೆಂಗಳೂರು ತಂಡದ ಜಯದ ಸರಣಿಯನ್ನು ತುಂಡರಿಸಿದೆ ಮಾತ್ರವಲ್ಲದೆ ಅಂಕಪಟ್ಟಿಯಲ್ಲಿ ನಂ.. 1 ಸ್ಥಾನಕ್ಕೇರಿದೆ.

ಚೆನ್ನೈ ಪರ ರವೀಂದ್ರ ಜಡೇಜಾ 3, ತಹೀರ್ 2, ಸ್ಯಾಮ್ ಕರ್ರನ್ ಹಾಗೂ ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದು ಮಿಂಚಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!