ಕೆಕೆಆರ್ 
ಕ್ರಿಕೆಟ್

ಐಪಿಎಲ್ 2021: ಪಂಜಾಬ್ ಕಿಂಗ್ಸ್ ವಿರುದ್ಧ ಕೋಲ್ಕತಾಗೆ 5 ವಿಕೆಟ್ ಗಳ ಭರ್ಜರಿ ಜಯ

ನಾಯಕ ಇಯಾನ್ ಮಾರ್ಗನ್(47) ಹಾಗೂ  ರಾಹುಲ್ ತ್ರಿಪಾಠಿ(41) ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಕೋಲ್ಕತಾ ನೈಟ್ ರೈಡರ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.

ಅಹಮದಾಬಾದ್: ನಾಯಕ ಇಯಾನ್ ಮಾರ್ಗನ್(47) ಹಾಗೂ  ರಾಹುಲ್ ತ್ರಿಪಾಠಿ(41) ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಕೋಲ್ಕತಾ ನೈಟ್ ರೈಡರ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಇದರೊಂದಿಗೆ ಕೆಕೆಆರ್ ಸತತ ನಾಲ್ಕು ಸೋಲುಗಳ ಸರಣಿಯಯನ್ನು ಕಳಚಿಕೊಂಡಿದೆ.

ಇಂದು ನರೇಂದ್ರ ಮೋದಿ  ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ಕಿಂಗ್ಸ್ , ಒಂಬತ್ತು ವಿಕೆಟ್ ನಷ್ಟಕ್ಕೆ ಕೇವಲ 123 ರನ್ ಗಳಿಸಲಷ್ಟೇ ಶಕ್ತವಾಯಿತು. 

ಗೆಲುವಿಗೆ 124  ರನ್ ಗಳ ಗುರಿ ಬೆನ್ನತ್ತಿದ ಕೆಕೆಆರ್ ಒಂದು ಹಂತದಲ್ಲಿ 17 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದರೂ ತ್ರಿಪಾಠಿ ಹಾಗೂ ನಾಯಕ ಮಾರ್ಗನ್ ಅವರ ಅರ್ಧಶತಕದ ಜೊತೆಯಾಟ ತಂಡವನ್ನು ಗೆಲುವಿನ ದಡ ಸೇರಿಸಲು ನೆರವಾಯಿತು. 16. 4 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ ಕೆಕೆಆರ್ ಗೆಲುವಿನ ಗುರಿ ತಲುಪಿತು.

ಈ ಗೆಲುವಿನೊಂದಿಗೆ ಕೆಕೆಆರ್ ಆಡಿರುವ ಆರು ಪಂದ್ಯಗಳಲ್ಲಿ ಒಟ್ಟು ನಾಲ್ಕು ಅಂಕಗಳೊಂದಿಗೆ ಕೊನೆಯ ಸ್ಥಾನದಿಂದ ಐದನೇ ಸ್ಥಾನಕ್ಕೆ ಜಿಗಿದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT