ಎಬಿ ಡಿವಿಲಿಯರ್ಸ್ 
ಕ್ರಿಕೆಟ್

ಐಪಿಎಲ್ 2021: ರೋಚಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಆರ್ ಸಿಬಿ ಗೆ 1 ರನ್ ಗೆಲುವು

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಅಜೇಯ 75 ರನ್ ಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ರನ್ ನಿಂದ ಗೆಲುವು ಸಾಧಿಸಿದೆ.

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಅಜೇಯ 75 ರನ್ ಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ರನ್ ನಿಂದ ಗೆಲುವು ಸಾಧಿಸಿದೆ.

ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ ಸಿಬಿ ನಿಗದಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿ, ಡೆಲ್ಲಿ ಗೆಲುವಿಗೆ 172 ರನ್ ಗಳ ಗುರಿ ನೀಡಿತ್ತು.

172 ರನ್ ಗಳ ಗುರಿ ಬೆನ್ನತ್ತಿದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 170 ರನ್ ಸೇರಿಸಿ 1 ರನ್ ನಿಂದ ಸೋಲೊಪ್ಪಿಕೊಂಡಿತು.

ಆರ್ ಸಿಬಿ ಪರ ಆಕರ್ಷಕ ಅರ್ಧಶತಕ ಬಾರಿಸಿದ ಎಬಿ ಡಿವಿಲಿಯರ್ಸ್ 42 ಬಾಲ್ ಗೆ 5 ಸಿಕ್ಸ್, 3 ಫೋರ್ ಸಹಿತ 75 ರನ್ ಕಲೆಹಾಕಿದರೆ, ರಜತ್ ಪಾಟೀದಾರ್ 31, ಮ್ಯಾಕ್ಸ್ ವೆಲ್ 25 ಗಳಿಸಿದರು.

ಇನ್ನು ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ 12 ರನ್ ಮತ್ತು ದೇವದತ್ ಪಡಿಕ್ಕಲ್ 17 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ