ಕ್ರಿಕೆಟ್

ಅಭ್ಯಾಸದ ವೇಳೆ ತಲೆಗೆ ಗಾಯ, ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಿಂದ ಹೊರಗುಳಿದ ಮಯಾಂಕ್ ಅಗರ್ವಾಲ್

Lingaraj Badiger

ಲಂಡನ್: ಟೀಂ ಇಂಡಿಯಾ ಆರಂಭಿಕ ಆಟಗಾರ, ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ತಲೆಗೆ ಚೆಂಡು ಬಡಿದ ಕಾರಣ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

ಮಯಾಂಕ್ ಅವರು ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ವೇಳೆ ಸಹ ಆಟಗಾರ ಮೊಹಮ್ಮದ್ ಸಿರಾಜ್ ಅವರು ಎಸೆದ ಶಾರ್ಟ್ ಬಾಲ್ ಅವರ ಹೆಲ್ಮೆಟ್‍ಗೆ ತಾಗಿ ತಲೆಗೆ ಗಾಯಾವಾಗಿದೆ. 

"ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ನೆಟ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುವಾಗ ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ ಅವರ ತಲೆಗೆ ಚೆಂಡು ಬಡಿದು ಗಾಯವಾಗಿದೆ" ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಂಡದ ಆರೋಗ್ಯ ಸಿಬ್ಬಂದಿ ಅಗರ್ವಾಲ್ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದು, ಮೊದಲ ಟೆಸ್ಟ್‌ನಿಂದ ಅವರು ಹೊರಗುಳಿಯಲಿದ್ದಾರೆ ಎಂದು ಶಾ ಹೇಳಿದ್ದಾರೆ.

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 4 ರಿಂದ ಆರಂಭವಾಗಲಿದ್ದು, ಈಗಾಗಲೇ ಗಾಯದಿಂದಾಗಿ ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್ ಮತ್ತು ಅವೇಶ್ ಖಾನ್ ಹೊರ ನಡೆದಿದ್ದಾರೆ. ಇದೀಗ ತಂಡದ ಆರಂಭಿಕ ಆಟಗಾರ ಅಗರ್ವಾಲ್ ಕೂಡ ಒಂದು ಪಂದ್ಯದಿಂದ ಹೊರಗುಳಿಯುವಂತಾಗಿದೆ.

SCROLL FOR NEXT