ಭಾರತದ ಆಟಗಾರರು 
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್: 183ಕ್ಕೆ ಇಂಗ್ಲೆಂಡ್ ಆಲೌಟ್, 162 ರನ್ ಗಳಿಂದ ಹಿಂದಿರುವ ಭಾರತ

ಇಲ್ಲಿನ ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭವಾದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ದಿನದಾಟ ಅಂತ್ಯಕ್ಕೆ ಇಂಗ್ಲೆಂಡ್  ತಂಡ 183 ರನ್ ಗಳಿಗೆ ಆಲ್ ಔಟ್ ಆಗಿದ್ದು, ಭಾರತ 162 ರನ್ ಗಳಿಂದ ಹಿಂದಿದೆ. ರೋಹಿತ್ ಶರ್ಮಾ ಹಾಗೂ ಕೆ ಎಲ್ ರಾಹುಲ್ ಕ್ರೀಸ್ ನಲ್ಲಿದ್ದು, ತಲಾ 9 ರನ್ ಗಳಿಸಿದ್ದಾರೆ.

ನಾಟಿಂಗ್ ಹ್ಯಾಮ್: ಇಲ್ಲಿನ ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭವಾದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ದಿನದಾಟ ಅಂತ್ಯಕ್ಕೆ ಇಂಗ್ಲೆಂಡ್  ತಂಡ 183 ರನ್ ಗಳಿಗೆ ಆಲ್ ಔಟ್ ಆಗಿದ್ದು, ಭಾರತ 162 ರನ್ ಗಳಿಂದ ಹಿಂದಿದೆ. ರೋಹಿತ್ ಶರ್ಮಾ ಹಾಗೂ ಕೆ ಎಲ್ ರಾಹುಲ್ ಕ್ರೀಸ್ ನಲ್ಲಿದ್ದು, ತಲಾ 9 ರನ್ ಗಳಿಸಿದ್ದಾರೆ.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ರೋರಿ ಜೋಸೆಫ್ ಬರ್ನ್ಸ್ ಅವರನ್ನು ಮೊದಲ ಓವರ್ ನಲ್ಲಿಯೇ ಶೂನ್ಯಕ್ಕೆ ಜಸ್ಪ್ರೀತ್ ಬೂಮ್ರಾ ಎಲ್ ಬಿಡಬ್ಲ್ಯೂಬಲೆಗೆ ಕೆಡವಿದರೆ, ಡೊಮ್ಮಿ ಸಿಬ್ಲಿ 18 ರನ್ ಗಳಿಸಿ ಕೆ.ಎಲ್. ರಾಹುಲ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಬಂದ ಝಾಕ್ ಕ್ರಾಲೀ 27, ರೂಟ್ 64, ಜಾನಿ ಬೇಸ್ಟೋರ್ವ್ 29, ಡನ್ ಲಾರೆನ್ಸ್ ಹಾಗೂ ಜೋಸ್ ಬಟ್ಲರ್  ಶೂನ್ಯಕ್ಕೆ  ಔಟಾದರು. ಸ್ಯಾನ್ ಕರನ್ 27, ಸ್ಟುವರ್ಡ್ ಬ್ರಾಡ್ 4, ಜೀಮ್ಸ್ ಅಂಡರ್ಸನ್ ಕೇವಲ 1 ರನ್ ಗಳಿಸಿ ಔಟಾದರು.

ಬೂಮ್ರಾ (46ಕ್ಕೆ 4) ಮತ್ತು ಶಮಿ (28ಕ್ಕೆ 3) ಇವರಿಬ್ಬರ ಆಟಕ್ಕೆ ತತ್ತರಿಸಿದ ಇಂಗ್ಲೆಂಡ್ ತಂಡ 65.4 ಓವರ್ ಗಳಲ್ಲಿ 183 ರನ್ ಗಳಿಸಿ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿರುವ ಟೀಂ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಆಟ ಆರಂಭಿಸಿದ್ದು, ವಿಕೆಟ್ ನಷ್ಟವಿಲ್ಲದೆ 21 ರನ್ ಗಳಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT