ಕ್ರಿಕೆಟ್

5ನೇ ದಿನ ಸಂಪೂರ್ಣ ಮಳೆಗೆ ಆಹುತಿ; ಇಂಗ್ಲೆಂಡ್-ಭಾರತ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

Vishwanath S

ನಾಟಿಂಗ್‌ಹ್ಯಾಮ್: ಇಂಗ್ಲೆಂಡ್ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಪಂದ್ಯದಲ್ಲಿ ಭಾರತ ಗೆಲುವಿನ ಸನಿಹದಲ್ಲಿತ್ತು. ಆದರೆ ಐದನೇ ದಿನದಾಟ ಸಂಪೂರ್ಣವಾಗಿ ಮಳೆಗೆ ಆಹುತಿಯಾಗಿದ್ದರಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು. 

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಕೊನೆ ದಿನ ಭಾರತಕ್ಕೆ ಗೆಲ್ಲಲು 157 ರನ್ ಬೇಕಿತ್ತು. ಆದರೆ ಪಂದ್ಯ ಆರಂಭಕ್ಕೂ ಮೊದಲೇ ಮಳೆ ಶುರುವಾಗಿತ್ತು. ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವುದರಿಂದ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು. 

ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ತಂಡ 183 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 278 ರನ್ ಗಳಿಗೆ ಆಲೌಟ್ ಆಗಿತ್ತು. 

95 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ ನಾಲ್ಕನೇ ದಿನದಾಟದಲ್ಲಿ 303 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಭಾರತಕ್ಕೆ ಗೆಲ್ಲಲು 209 ರನ್ ಗಳ ಗುರಿ ನೀಡಿತ್ತು. 

ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ನಾಲ್ಕನೇ ದಿನದಾಟದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 52 ರನ್ ಬಾರಿಸಿದ್ದು ಐದನೇ ದಿನ ಪಂದ್ಯ ಗೆಲ್ಲಲು ಟೀಂ ಇಂಡಿಯಾಗೆ 157 ರನ್ ಬೇಕಿತ್ತು.

SCROLL FOR NEXT