ಶಮಿ-ಬುಮ್ರಾ 
ಕ್ರಿಕೆಟ್

2ನೇ ಟೆಸ್ಟ್: ಶಮಿ, ಬುಮ್ರಾ ಜೊತೆಯಾಟ, ಇಂಗ್ಲೆಂಡ್ ಗೆ 272 ರನ್ ಗುರಿ; 2 ವಿಕೆಟ್ ಪತನ, ಆಂಗ್ಲರಿಗೆ ಆರಂಭಿಕ ಆಘಾತ!

ಕೆಳ ಕ್ರಮಾಂಕದಲ್ಲಿ ಮೊಹಮ್ಮದ್ ಶಮಿ ಹಾಗೂ ಜಸ್ಪ್ರಿತ್ ಬುಮ್ರಾ ಅವರ ಭರ್ಜರಿ ಜೊತೆಯಾಟದ ನೆರವಿನಿಂದ ಟೀಮ್ ಇಂಡಿಯಾ ಇಲ್ಲಿ ನಡೆದಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡಕ್ಕೆ 272 ರನ್ ಗಳ ಗುರಿ ನೀಡಿದೆ.

ಲಾರ್ಡ್ಸ್: ಕೆಳ ಕ್ರಮಾಂಕದಲ್ಲಿ ಮೊಹಮ್ಮದ್ ಶಮಿ ಹಾಗೂ ಜಸ್ಪ್ರಿತ್ ಬುಮ್ರಾ ಅವರ ಭರ್ಜರಿ ಜೊತೆಯಾಟದ ನೆರವಿನಿಂದ ಟೀಮ್ ಇಂಡಿಯಾ ಇಲ್ಲಿ ನಡೆದಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡಕ್ಕೆ 272 ರನ್ ಗಳ ಗುರಿ ನೀಡಿದೆ.

ಸೋಮವಾರ ಆರನೇ ವಿಕೆಟ್ ನಷ್ಟಕ್ಕೆ 181 ರನ್ ಗಳಿಂದ ಎರಡನೇ ಇನ್ನಿಂಗ್ಸ್ ಮುಂದುವರಿಸಿದ ಭಾರತ 8 ವಿಕೆಟ್ ಗೆ 298 ರನ್ ಕಲೆ ಹಾಕಿ ಡಿಕ್ಲೇರ್ ಮಾಡಿಕೊಂಡಿತು.

ಯುವ ವಿಕೆಟ್ ಕೀಪರ್ ರಿಷಭ್ ಪಂತ್ (22) ದೊಡ್ಡ ಇನ್ನಿಂಗ್ಸ್ ಕಟ್ಟುವಲ್ಲಿ ಎಡವಿದರು. ಇಶಾಂತ್ ಶರ್ಮಾ (16) ಜವಾಬ್ದಾರಿ ಮರೆತರು. 209 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಬುಮ್ರಾ ಹಾಗೂ ಶಮಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಇಂಗ್ಲೆಂಡ್ ತಂಡದ ಬೌಲರ್ ಗಳನ್ನು ಕಾಡಿತು. ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಬೌಲರ್ ಗಳು ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಶ್ರಮಿಸಿತು.

ವೇಗಿ ಶಮಿ 70 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 56 ರನ್ ಬಾರಿಸಿದರು. ಇನ್ನು ಜಸ್ಪ್ರಿತ್ ಬುಮ್ರಾ ಅಜೇಯ 34 ರನ್ ಬಾರಿಸಿ ಮಿಂಚಿದರು.

ಇಂಗ್ಲೆಂಡ್ ಪರ ಮಾರ್ಕ್ ವುಡ್ 3, ಮೋಯಿನ್ ಅಲಿ, ಒಲಿ ರಾಬಿನ್ಸನ್ ತಲಾ ಎರಡು ವಿಕೆಟ್ ಪಡೆದರು.

ಸಂಕ್ಷಿಪ್ತ ಸ್ಕೋರ್
ಭಾರತ 364, ಎರಡನೇ ಇನ್ನಿಂಗ್ಸ್ 8 ವಿಕೆಟ್ ಗೆ 298 ಡಿಕ್ಲೇರ್
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 391
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT