ಹೆಡಿಂಗ್ಲೆ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮೂರನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಆರಂಭಿಸಿದ್ದು ಆರಂಭಿಕ ಆಘಾತ ಎದುರಿಸಿದೆ.
ಲೀಡ್ಸ್ ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದ್ದು 4 ರನ್ ಗಳಿಗೆ ಪ್ರಮುಖ ಎರಡು ವಿಕೆಟ್ ಕಳೆದುಕೊಂಡಿದೆ.
ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾದರೆ, ಚೇತೇಶ್ವರ ಪೂಜಾರ 1 ರನ್ ಗೆ ಔಟಾಗಿದ್ದಾರೆ. ಸದ್ಯ ಟೀಂ ಇಂಡಿಯಾ 11 ರನ್ ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಬ್ಯಾಟಿಂಗ್ ಮಾಡುತ್ತಿದೆ.
ರೋಹಿತ್ ಶರ್ಮಾ ಅಜೇಯ 1 ರನ್ ಬಾರಿಸಿದ್ದು ವಿರಾಟ್ ಕೊಹ್ಲಿ ಅಜೇಯ 3 ರನ್ ಬಾರಿಸಿ ಆಡುತ್ತಿದ್ದಾರೆ.
ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆಂಡರ್ಸನ್ 2 ವಿಕೆಟ್ ಗಳನ್ನು ಪಡೆದಿದ್ದಾರೆ.