ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಆಫ್ರಿಕಾ ವೇಗಿ ಡೇಲ್ ಸ್ಟೇನ್ ವಿದಾಯ!

Vishwanath S

ಕೇಪ್ ಟೌನ್: ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೇನ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ 17 ವರ್ಷಗಳ ವೃತ್ತಿಜೀವನದ ನಿವೃತ್ತಿಯನ್ನು ಘೋಷಿಸಿದ್ದಾರೆ. ಸ್ಟೇನ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಟ್ಟಾರೆ 635 ವಿಕೆಟ್ ಗಳನ್ನು ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾ ಪರ  93 ಟೆಸ್ಟ್​ ಪಂದ್ಯಗಳನ್ನು ಆಡಿರುವ ಸ್ಟೇನ್ 435 ವಿಕೆಟ್ ಪಡೆದಿದ್ದಾರೆ. ಇನ್ನು 125 ಏಕದಿನ ಪಂದ್ಯಗಳಿಂದ 196 ಮತ್ತು 47 ಟಿ20 ಪಂದ್ಯಗಳಿಂದ 64 ವಿಕೆಟ್ ಪಡೆದಿದ್ದಾರೆ. 

ತಮ್ಮ ಪೋಸ್ಟ್ ನಲ್ಲಿ ಡೇಲ್ ಸ್ಟೇನ್ ತಮ್ಮ ತಂಡದ ಆಟಗಾರರು, ಎಲ್ಲಾ ಅಭಿಮಾನಿಗಳು, ಕುಟುಂಬ ಮತ್ತು ಪತ್ರಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

SCROLL FOR NEXT