ಬಿಸಿಸಿಐ ಲೋಗೋ 
ಕ್ರಿಕೆಟ್

ಓಮಿಕ್ರಾನ್ ಭೀತಿ ನಡುವೆಯೇ ಟೀಂ ಇಂಡಿಯಾದಿಂದ ದಕ್ಷಿಣ ಆಫ್ರಿಕಾ ಪ್ರವಾಸ; ಡಿ.26ರಂದು ಮೊದಲ ಟೆಸ್ಟ್!

ಇಡೀ ಜಗತ್ತಿಗೆ ಭೀತಿ ಹುಟ್ಟಿಸಿರುವ ಓಮಿಕ್ರಾನ್ ರೋಪಾಂತರಿ ಕೊರೋನಾ ವೈರಸ್ ಸೋಂಕಿನ ನಡುವೆಯೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್ ಸೌತ್ ಆಫ್ರಿಕಾ (ಸಿಎಸ್‌ಎ) ಒಪ್ಪಂದಕ್ಕೆ ಬಂದಿದ್ದು, ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಸ್ಪಷ್ಟವಾಗಿದೆ.

ನವದೆಹಲಿ: ಇಡೀ ಜಗತ್ತಿಗೆ ಭೀತಿ ಹುಟ್ಟಿಸಿರುವ ಓಮಿಕ್ರಾನ್ ರೋಪಾಂತರಿ ಕೊರೋನಾ ವೈರಸ್ ಸೋಂಕಿನ ನಡುವೆಯೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್ ಸೌತ್ ಆಫ್ರಿಕಾ (ಸಿಎಸ್‌ಎ) ಒಪ್ಪಂದಕ್ಕೆ ಬಂದಿದ್ದು, ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಸ್ಪಷ್ಟವಾಗಿದೆ.

ಆಫ್ರಿಕಾದಲ್ಲಿ ಓಮಿಕ್ರಾನ್ ರೂಪಾಂತರ ಸೋಂಕು ಉಲ್ಬಣವಾದ ಹಿನ್ನಲೆಯಲ್ಲಿ ಭಾರತ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದ ಮೇಲೆ ಅನುಮಾನಗಳು ಮೂಡಿದ್ದವು. ಆದರೆ ಇದೀಗ ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿದ್ದು, ಪ್ರವಾಸ ಮುಂದುವರೆಯಲಿದೆ ಎಂದು ಹೇಳಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು, 'ಭಾರತ ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಪ್ರವಾಸದ ಭಾಗವಾಗಿದ್ದ ನಾಲ್ಕು ಟಿ20 ಪಂದ್ಯಗಳನ್ನು ನಂತರ ಆಡಲಾಗುತ್ತದೆ ಎಂದು ಶನಿವಾರ ಪ್ರಕಟಿಸಿದ್ದಾರೆ.

ಈ ಕುರಿತು ಉಭಯ ಕ್ರಿಕೆಟ್ ಮಂಡಳಿಗಳು ಸುಧೀರ್ಘ ಚರ್ಚೆ ನಡೆಸಿ ಒಂದು ಒಪ್ಪಂದಕ್ಕೆ ಬಂದಿದ್ದು, ಅದರಂತೆ 'ಭಾರತ ತಂಡವು ಈ ತಿಂಗಳ ಕೊನೆಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಂದು ಆರಂಭವಾಗಲಿದೆ. ಅಂತೆಯೇ ಉಭಯ ಕ್ರಿಕೆಟ್ ಬೋರ್ಡ್‌ಗಳು ನಾಲ್ಕು ಟ್ವೆಂಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ನಂತರದ ದಿನಾಂಕದಲ್ಲಿ ಆಡಲಾಗುವುದು ಎಂದು ನಿರ್ಧರಿಸಿವೆ. 

ಆದರೆ ಸರಣಿಯ ಸ್ಥಳಗಳನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಆದರೆ ಬಾಕ್ಸಿಂಗ್ ಡೇ ಟೆಸ್ಟ್ ಅನ್ನು ಈ ಹಿಂದೆ ಆಯೋಜಿಸಲಾಗಿದ್ದ ಡರ್ಬನ್‌ ಕ್ರೀಡಾಂಗಣದಲ್ಲಿ ಅಲ್ಲದೆ ಸೆಂಚುರಿಯನ್‌ನಲ್ಲಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. 

ತವರಿನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಪಂದ್ಯದ ಬಳಿಕ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡಗಳ ಪಂದ್ಯ ನಿಗದಿಯಾಗಿದೆ. ಪ್ರವಾಸದಲ್ಲಿ ಭಾರತ ತಂಡ 3 ಟೆಸ್ಟ್, 3 ಏಕದಿನ ಹಾಗೂ 4 ಟಿ20 ಸರಣಿಗಳ ವೇಳಾಪಟ್ಟಿ ಈಗಾಗಲೇ ನಿಗದಿಯಾಗಿತ್ತು. ಆದರೆ 4 ಟಿ20 ಪಂದ್ಯಗಳನ್ನು ಮುಂದೂಡಿದ್ದಾರೆ. ಡಿ.17ರಿಂದ ಜೊಹಾನ್ಸ್ ಬರ್ಗ್‍ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್