ಟೀಂ ಇಂಡಿಯಾ 
ಕ್ರಿಕೆಟ್

2ನೇ ಟೆಸ್ಟ್: ಗೆಲುವಿನ ಸನಿಹದಲ್ಲಿ ಟೀಂ ಇಂಡಿಯಾ, ಭಾರತಕ್ಕೆ ಗೆಲ್ಲಲು 5 ವಿಕೆಟ್ ಅವಶ್ಯಕತೆ!

ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಸನಿಹಕ್ಕೆ ತಲುಪಿದೆ. 

ಮುಂಬೈ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಸನಿಹಕ್ಕೆ ತಲುಪಿದೆ. 

ಮುಂಬೈನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಅಂತ್ಯಕ್ಕೆ ನ್ಯೂಜಿಲ್ಯಾಂಡ್ ಎರಡನೇ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿದೆ. ಇನ್ನು ನ್ಯೂಜಿಲ್ಯಾಂಡ್ ಗೆಲುವಿಗೆ 400 ರನ್ ಗಳನ್ನು ಸಿಡಿಸಬೇಕಿದೆ.

ಇನ್ನು ನಾಲ್ಕನೇ ದಿನದಾಟದಲ್ಲಿ ಭಾರತ ಇನ್ನು ಐದು ವಿಕೆಟ್ ಪಡೆದರೆ ಗೆಲುವಿನ ನಗೆ ಬೀರಲಿದೆ. ಅಶ್ವಿನ್ ಅವರ ಮಾರಕ ಬೌಲಿಂಗ್ ದಾಳಿಯಿಂದಾಗಿ ಭಾರತ ಅಲ್ಪಮೊತ್ತಕ್ಕೆ ನ್ಯೂಜಿಲ್ಯಾಂಡ್ ತಂಡದವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದೆ. 

ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 325 ರನ್ ಪೇರಿಸಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲ್ಯಾಂಡ್ 62 ರನ್ ಗಳ ಅಲ್ಪಮೊತ್ತಕ್ಕೆ ಆಲೌಟ್ ಆಗಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಭಾರತ 276 ರನ್ ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. 

ಭಾರತ ನೀಡಿದ 540 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ಗೆ ಟೀಂ ಇಂಡಿಯಾ ಬೌಲರ್ ಗಳು ಮಾರಕರಾಗಿದ್ದಾರೆ. ಮೂರನೇ ದಿನದಾಟಕ್ಕೆ ನ್ಯೂಜಿಲ್ಯಾಂಡ್ 5 ವಿಕೆಟ್ ನಷ್ಟಕ್ಕೆ 140 ರನ್ ಪೇರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್