ಆರ್ ಅಶ್ವಿನ್ 
ಕ್ರಿಕೆಟ್

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಎರಡನೇ ಸ್ಥಾನಕ್ಕೇರಿದ ಆಶ್ವಿನ್, 11ನೇ ಸ್ಥಾನಕ್ಕೆ ಜಿಗಿದ ಅಗರ್ವಾಲ್

ಅಂತರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಐಸಿಸಿ) ಬುಧವಾರ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಮುಂಬೈನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ...

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಐಸಿಸಿ) ಬುಧವಾರ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, 
ಮುಂಬೈನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಮತ್ತು ಅನುಭವಿ ಆಟಗಾರ ಆರ್ ಅಶ್ವಿನ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಆರ್ ಅಶ್ವಿನ್ ಅವರು ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಅಶ್ವಿನ್ ಅವರು ಈಗ 360 ಅಂಕಗಳನ್ನು ಹೊಂದಿದ್ದಾರೆ. ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಅಶ್ವಿನ್ ತಲಾ ಮೂರು ವಿಕೆಟ್ ಪಡೆದಿದ್ದರು.

ಮೊದಲ ಸ್ಥಾನದಲ್ಲಿ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಇದ್ದು, ಅಶ್ವಿನ್‌ಗಿಂತ 22 ಅಂಕಗಳಷ್ಟು ಮುಂದಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಆರ್ ಅಶ್ವಿನ್‌ಗಿಂತ 12 ಅಂಕಗಳಷ್ಟು ಹಿಂದಿದ್ದಾರೆ.

ಇನ್ನು ಗಾಯದ ಕಾರಣದಿಂದಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದ ರವೀಂದ್ರ ಜಡೇಜಾ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.

ಎರಡನೇ ಟೆಸ್ಟ್‌ನಲ್ಲಿ ಭರ್ಜರಿ ಶತಕ ಹಾಗೂ ಅರ್ಧ ಶತಕಗಳಿಸಿ ಮಿಂಚಿದ್ದ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿಯಲ್ಲಿ 11ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!