ರೋಹಿತ್ ಶರ್ಮ 
ಕ್ರಿಕೆಟ್

ದಕ್ಷಿಣ ಆಫ್ರಿಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ: ರೋಹಿತ್ ಶರ್ಮಾ ಟೂರ್ನಿಯಿಂದಲೇ ಔಟ್

ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಸ್ಫೋಟಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ನವದೆಹಲಿ: ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಸ್ಫೋಟಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಇದೇ ತಿಂಗಳು 26 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಆರಂಭವಾಗಲಿರುವ 3 ಪಂದ್ಯಗಳ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ (Rohit Sharma) ಹೊರಗುಳಿದಿದ್ದಾರೆ. ಅಭ್ಯಾಸದ ವೇಳೆ ರೋಹಿತ್ ಶರ್ಮಾ ಗಾಯಗೊಂಡಿದ್ದು, ಹೀಗಾಗಿ ಟೆಸ್ಟ್ ಸರಣಿಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. 

ಟೆಸ್ಟ್ ತಂಡದ ನೂತನ ಉಪನಾಯಕರಾಗಿ ನೇಮಕಗೊಂಡಿರುವ ರೋಹಿತ್ ಅವರು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿರುವಾಗ ಮಂಡಿ ರಜ್ಜು ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಸರಣಿ ಆಡುವುದು ಅನುಮಾನ ಎನ್ನಲಾಗಿತ್ತು. ಆದರೀಗ ಟೆಸ್ಟ್ ಸರಣಿಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದು, ಜನವರಿಯಲ್ಲಿ ನಡೆಯಲಿರುವ ಏಕದಿನ ಸರಣಿಗೆ ತಂಡವನ್ನು ಸೇರಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯ  ಡಿಸೆಂಬರ್ 26 ರಿಂದ ಶುರುವಾಗಲಿದ್ದು, ಎರಡನೇ ಟೆಸ್ಟ್ ಜನವರಿ 3 ರಿಂದ ಆರಂಭವಾಗಲಿದೆ. ಹಾಗೆಯೇ ಮೂರನೇ ಟೆಸ್ಟ್ ಜನವರಿ 11 ರಿಂದ 15 ವರೆಗೆ ನಡೆಯಲಿದೆ.

ರೋಹಿತ್ ಶರ್ಮಾ ಬದಲಿಗೆ ತಂಡದಲ್ಲಿ 31 ವರ್ಷದ ಪ್ರಿಯಾಂಕ್ ಪಾಂಚಾಲ್ (Priyank Panchal) ಅವರನ್ನು ಆಯ್ಕೆ ಮಾಡಲಾಗಿದೆ.

ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ ಮುಕ್ತಾಯಗೊಂಡ ಎರಡು-ಟೆಸ್ಟ್ ಸರಣಿ ವೇಳೆ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದರು. ಇದೀಗ ಗಾಯಗೊಂಡ ಪರಿಣಾಮ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಬಿಸಿಸಿಐ ಹೊಸ ಉಪನಾಯಕನನ್ನು ಆಯ್ಕೆ ಮಾಡಲಿದೆ. ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಟೆಸ್ಟ್ ತಂಡದ ಉಪನಾಯಕನಾಗಿ ಹಾಗೂ ಏಕದಿನ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಬಿಸಿಸಿಐ ಆಯ್ಕೆ ಮಾಡಿಕೊಂಡಿತ್ತು. ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ಕಾರಣ ಕೆಎಲ್ ರಾಹುಲ್​ಗೆ ಅಥವಾ ಅಜಿಂಕ್ಯ ರಹಾನೆಗೆ ಉಪನಾಯಕನ ಸ್ಥಾನ ಒಲಿಯುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!