ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ಇಂಥವರಿಂದಲೇ ಜಗತ್ತು ಸುಂದರವಾಗಿದೆ: ಫ್ರೆಂಡ್ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್ ಗೆ ಸಚಿನ್ ಭಾವನಾತ್ಮಕ ಸಂದೇಶ

ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಸಹೃದಯತೆಯನ್ನು ಪ್ರದರ್ಶಿಸಿದ್ದಾರೆ. ರಸ್ತೆ ಅಪಘಾತಕ್ಕೀಡಾದ ತನ್ನ ಸ್ನೇಹಿತೆಯನ್ನು ರಕ್ಷಿಸಿದ ಸಂಚಾರಿ ಪೊಲೀಸರನ್ನು ಖುದ್ದಾಗಿ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.

ಮುಂಬೈ: ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಸಹೃದಯತೆಯನ್ನು ಪ್ರದರ್ಶಿಸಿದ್ದಾರೆ. ರಸ್ತೆ ಅಪಘಾತಕ್ಕೀಡಾದ ತನ್ನ ಸ್ನೇಹಿತೆಯನ್ನು ರಕ್ಷಿಸಿದ ಸಂಚಾರಿ ಪೊಲೀಸರನ್ನು ಖುದ್ದಾಗಿ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.

ಇತ್ತೀಚೆಗೆ ಸಚಿನ್ ಅವರ ಸ್ನೇಹಿತೆಯೊಬ್ಬರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಸಮಯದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರು ತಕ್ಷಣವೇ ಸ್ಪಂದಿಸಿ ಆಕೆಯನ್ನು ಆಟೋದಲ್ಲಿ ತ್ವರಿತವಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು.

ಈ ಘಟನೆಯನ್ನು ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಸಚಿನ್, “ಇಂತಹ ಜನರಿಂದ ಜಗತ್ತು ಸುಂದರವಾಗಿದೆ” ಎಂದು ಹೇಳಿದ್ದಾರೆ. ಜನರ ಜೀವ ಉಳಿಸಲು ದೇಶಾದ್ಯಂತ ಟ್ರಾಫಿಕ್ ಪೊಲೀಸರು ಶ್ರಮಿಸುತ್ತಿದ್ದಾರೆ . ಅವರಿಗೆ ಅಭಿನಂದನೆಗಳು. ನಾವೆಲ್ಲರೂ ಸಂಚಾರ ನಿಯಮಗಳನ್ನು ಪಾಲಿಸೋಣ ಎಂದು ಸಚಿನ್‌ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT