ಯಾಸಿರ್ ಶಾ 
ಕ್ರಿಕೆಟ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಪಾಕ್ ಕ್ರಿಕೆಟಿಗನ ವಿರುದ್ಧ ಎಫ್ಐಆರ್; ಕಾರ್, ಫ್ಲ್ಯಾಟ್ ಕೊಡಿಸುವ ಅಮಿಷ

ಪಾಕಿಸ್ತಾನದ ಅನುಭವಿ ಲೆಗ್ ಸ್ಪಿನ್ನರ್ ಯಾಸಿರ್ ಶಾ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. 14 ವರ್ಷದ ಅಪ್ರಾಪ್ತ ಬಾಲಕಿ ಕ್ರಿಕೆಟಿಗ ಯಾಸಿರ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದು,....

ಇಸ್ಲಾಮಾಬಾದ್: ಪಾಕಿಸ್ತಾನದ ಅನುಭವಿ ಲೆಗ್ ಸ್ಪಿನ್ನರ್ ಯಾಸಿರ್ ಶಾ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. 14 ವರ್ಷದ ಅಪ್ರಾಪ್ತ ಬಾಲಕಿ ಕ್ರಿಕೆಟಿಗ ಯಾಸಿರ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದು, ಈ ಕುರಿತು ಇಸ್ಲಾಮಾಬಾದ್ ನಲ್ಲಿ ಎಫ್ ಐ ಆರ್ ದಾಖಲಾಗಿದೆ.

ಕ್ರಿಕೆಟಿಗ ಯಾಸಿರ್ ಶಾ ಹಾಗೂ ಆತನ ಸ್ನೇಹಿತ ಫರ್ಹಾನ್ ಮೇಲೂ ಪ್ರಕರಣ ದಾಖಲಾಗಿದೆ. ಯಾಸಿರ್ ಶಾ ಪಾಕಿಸ್ತಾನಿ ಟೆಸ್ಟ್ ತಂಡದ ಪ್ರಮುಖ ಆಟಗಾರ. ಇಲ್ಲಿಯವರೆಗೆ ಶಾ 46 ಟೆಸ್ಟ್ ಪಂದ್ಯಗಳನ್ನು ಆಡಿದ್ದು 235 ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ, ಟೆಸ್ಟ್ ನಲ್ಲಿ ಒಂದು ಶತಕ ಗಳಿಸಿದ್ದಾರೆ.

18 ವರ್ಷದವರೆಗಿನ ಖರ್ಚು ನೋಡ್ಕೋತಿನಿ ಫ್ಲ್ಯಾಟ್, ಕಾರ್ ಕೂಡ ಕೊಡಸ್ತಿನಿ!
ದೂರಿನಲ್ಲಿ ಸಂತ್ರಸ್ತೆ, “ಯಾಸಿರ್ ಸ್ನೇಹಿತ ಪರ್ಹಾನ್, ಗನ್ ನಿಂದ ಬೆದರಿಸಿ ನನ್ನ ಮೇಲೆ ಅತ್ಯಾಚಾರ ಮಾಡಿದ ದೃಶ್ಯ ವಿಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ. ಈ ಬಗ್ಗೆ ಕ್ರಿಕೆಟಿಗ ಯಾಸಿರ್‌ನನ್ನು ವಾಟ್ಸಾಪ್‌ನಲ್ಲಿ ಪ್ರಶ್ನೆ ಮಾಡಿದ್ರೆ, ಆಗ ಫರ್ಹಾನ್ ಗೂ ಚಿಕ್ಕ ಹುಡುಗಿಯರು ಅಂದ್ರೆ ಇಷ್ಟ ಎಂದು ಗೇಲಿ ಮಾಡಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಅಲ್ಲದೆ ಕ್ರಿಕೆಟಿಗ ಯಾಸಿರ್, ನಾನು ತುಂಬಾ ಪ್ರಭಾವಶಾಲಿ ವ್ಯಕ್ತಿ. ನನಗೆ ದೊಡ್ಡ ಅಧಿಕಾರಿಗಳು ಗೊತ್ತು ಎಂದು ಬೆದರಿಕೆ ಹಾಕಿದ್ದರು. ಯಾಸಿರ್ ಹಾಗೂ ಫರ್ಹಾನ್ ಇಬ್ಬರು ಸೇರಿ ಅಪ್ರಾಪ್ತ ಹುಡುಗಿಯರ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡುತ್ತಾರೆ. ಅವರು ನನಗೆ ಫ್ಲ್ಯಾಟ್ ಹಾಗೂ ಕಾರು ಕೊಡುವುದಾಗಿ ಹೇಳಿದ್ದರು. ಅಲ್ಲದೆ 18 ವರ್ಷಗಳವರೆಗೆ ನನ್ನ ಖರ್ಚುಗಳನ್ನು ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು ಎಂದು ನೊಂದ ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.

ಈ ಸಂಬಂಧ ಇಸ್ಲಾಮಾಬಾದ್ ಪೊಲೀಸರು, ಯಾಸಿರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಶೀಘ್ರದಲ್ಲೇ ಸಂತ್ರಸ್ತೆ ಅಪ್ರಾಪ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪಾಕಿಸ್ತಾನದ ಪೊಲೀಸರು ತಿಳಿಸಿದ್ದಾರೆ. 

ಯಾಸಿರ್ ಫೋನ್ ಮೂಲಕ ಬೆದರಿಕೆ ಹಾಕುತ್ತಿದ್ದ ಮತ್ತು ಸ್ನೇಹಿತ ಫರ್ಹಾನ್ ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಎಂದು ಬಾಲಕಿ ಆರೋಪಿಸಿದ್ದಾರೆ.

14 ವರ್ಷದ ಬಾಲಕಿಯ ಚಿಕ್ಕಪ್ಪ ಕೂಡ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಇದರ ಪ್ರಕಾರ ಬಾಲಕಿಯ ಫೋನ್ ನಂಬರ್ ಅನ್ನು ಕ್ರಿಕೆಟಿಗ ಯಾಸಿರ್ ಶಾ ಫರ್ಹಾನ್ ಗೆ ನೀಡಿದ್ದ. ಇದಾದ ನಂತರ ಫರ್ಹಾನ್ ಆಕೆಯೊಂದಿಗೆ ನಿರಂತರವಾಗಿ ಮಾತನಾಡುತ್ತಿದ್ದ. ನಂತರ ಬಂದೂಕು ತೋರಿಸಿ ಅತ್ಯಾಚಾರ ಎಸಗಿದ್ದಾನೆ. ಫರ್ಹಾನ್ ನನ್ನು ಮದುವೆಯಾಗುವಂತೆ ಯಾಸಿರ್ ನಿರಂತರವಾಗಿ ಬಾಲಕಿಯ ಮೇಲೆ ಒತ್ತಡ ಹೇರುತ್ತಿದ್ದ. ಹುಡುಗಿ ಮದುವೆಯಾಗಲು ನಿರಾಕರಿಸಿದಾಗ, ಯಾಸಿರ್ ಅವಳಿಗೆ ಸುಮ್ಮನೆ ಇರುವಂತೆ ಬೆದರಿಕೆ ಹಾಕಿದ್ದ ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನದ ಕ್ರಿಕೆಟ್ ಕ್ಯಾಪ್ಟನ್ ಮೇಲೂ ಲೈಂಗಿಕ ದೌರ್ಜನ್ಯದ ಆರೋಪ
ಪಾಕಿಸ್ತಾನಿ ಕ್ರಿಕೆಟ್ ತಂಡದ ನಾಯಕ ಬಾಬರ್ ಆಜಮ್ ವಿರುದ್ಧವೂ ಲೈಂಗಿಕ ದೌರ್ಜನ್ಯದ ಆರೋಪವಿದೆ. ಬಾಬರ್ ತನ್ನ ಮೇಲೆ 10 ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿದಿದ್ದಾನೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದಾರೆ.

ಮಹಿಳೆಯ ಪ್ರಕಾರ, ಬಾಬರ್ ತನ್ನನ್ನು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ್ದನು. ತಾನು ಗರ್ಭಿಣಿಯಾದ ಮೇಲೆ ಬಾಬರ್ ಹೊಡೆದು ಸಾಯಿಸುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ಆರೋಪ ಮಾಡಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ