ಶತಕ ಗಳಿಸಿದ ಕನ್ನಡಿಗ ಕೆಎಲ್ ರಾಹುಲ್ 
ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್: ರಾಹುಲ್ ಶತಕದ ನೆರವಿನಿಂದ ಭಾರತ ಮೇಲುಗೈ

ಕೆ. ಎಲ್ ರಾಹುಲ್ ಅವರ 122 ರನ್ ಹಾಗೂ ಮಯಾಂಕ್ ಅಗರವಾಲ್ ಅವರ ಆಕರ್ಷಕ 60 ರನ್ ಗಳ ನೆರವಿನಿಂದ ಭಾರತ ತಂಡ ಮೊದಲ ದಿನದಾಟದ ಅಂತ್ಯಕ್ಕೆ ಭಾರತ ನಿಗದಿತ 90 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದೆ. ಈ ಮೂಲಕ ಭಾರತ ಮೇಲುಗೈ ಸಾಧಿಸಿದೆ.

ಸೆಂಚುರಿಯನ್: ಇಲ್ಲಿನ ಸೂಪರ್ ಸ್ಪೊರ್ಟ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ  ಪ್ರಥಮ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗರಾದ ಕೆ. ಎಲ್ ರಾಹುಲ್ ಅವರ 122 ರನ್ ಹಾಗೂ ಮಯಾಂಕ್ ಅಗರವಾಲ್ ಅವರ ಆಕರ್ಷಕ 60 ರನ್ ಗಳ ನೆರವಿನಿಂದ ಭಾರತ ತಂಡ ಮೊದಲ ದಿನದಾಟದ ಅಂತ್ಯಕ್ಕೆ ಭಾರತ ನಿಗದಿತ 90 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದೆ. ಈ ಮೂಲಕ ಭಾರತ ಮೇಲುಗೈ ಸಾಧಿಸಿದೆ.

ಆರಂಭಿಕ ಜೋಡಿಯಾಗಿ ಕಣಕ್ಕಿಳಿದ ರಾಹುಲ್ ಹಾಗೂ ಮಯಾಂಕ್ ಜೋಡಿ, ಮೊದಲ ವಿಕೆಟ್ ಗೆ ಶತಕದ (117 ರನ್ ) ಜೊತೆಯಾಟವಾಡಿದರು. ಈ ವೇಳೆ ಸಮರ್ಥ ಬೌಲಿಂಗ್ ದಾಳಿ ನಡೆಸಿದ ದಕ್ಷಿಣ ಆಫ್ರಿಕಾದ ಲುಂಗಿ ಗಿಡಿ, ಉತ್ತಮವಾಗಿ ಆಡುತ್ತಿದ್ದ ಮಯಾಂಕ್ ಜೊತೆಗೆ ಚೇತೇಶ್ವರ ಪೂಜಾರ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಬಳಿಕ ರಾಹುಲ್ ಜೊತೆಗೂಡಿದ ವಿರಾಟ್ ಕೊಹ್ಲಿ 35 ರನ್ ಗಳಿಸಿದಾಗ ಅವರನ್ನೂ ಕೂಡಾ ಗಿಡಿ ಔಟ್ ಮಾಡಿದರು. 

ನಂತರ ರಾಹುಲ್ ಗೆ ಜೊತೆಯಾದ ಅಜಿಂಕ್ಯ ರಹಾನೆ ಉತ್ತಮ ಸಾಥ್ ನೀಡಿದರು. 81 ಎಸೆತಗಳನ್ನು ಎದುರಿಸಿದ ರಹಾನೆ ಎಂಟು ಬೌಂಡರಿಗಳ ನೆರವಿನಿಂದ 40 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. 248 ಎಸೆತಗಳನ್ನು ಎದುರಿಸಿರುವ ರಾಹುಲ್, 122 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ದಕ್ಷಿಣ ಆಫ್ರಿಕಾ ಪರ ಗಿಡಿ 45 ರನ್ ನೀಡಿ ಮೂರು ವಿಕೆಟ್ ಕಬಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT