ಟೀಂ ಇಂಡಿಯಾ 
ಕ್ರಿಕೆಟ್

ಮೊದಲ ಟೆಸ್ಟ್: ಶಮಿ ಮಾರಕ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ; 197 ರನ್ ಗಳಿಗೆ ಸರ್ವಪತನ

ಪ್ರವಾಸಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಫ್ರಿಕಾ ತಂಡ 197 ರನ್ ಗಳಿಗೆ ಆಲೌಟ್ ಆಗಿದೆ.

ಸೆಂಚೂರಿಯನ್: ಪ್ರವಾಸಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಫ್ರಿಕಾ ತಂಡ 197 ರನ್ ಗಳಿಗೆ ಆಲೌಟ್ ಆಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರವಾಲ್ ಉತ್ತಮ ಆರಂಭಿಕ ನೀಡಿದರು. ಮಾಯಾಂಕ್ 60 ರನ್ ಗಳಿಸಿ ಔಟಾದರು. ನಂತರ ಬಂದ ಚೇತೇಶ್ವರ ಪೂಜಾರ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರು. 35 ರನ್ ಗಳಿಸಿ ಕೊಹ್ಲಿ ಔಟಾದರೆ ಅಜಿಂಕ್ಯ ರಹಾನೆ 48 ರನ್ ಬಾರಿಸಿದರು. ಇದಾದ ನಂತರ ಬಂದ ಬ್ಯಾಟರ್ ಗಳು ಎರಡಂಕಿ ದಾಟುವಲ್ಲಿ ವಿಫಲರಾಗಿ ಪೆಲಿವಿಯನ್ ಸೇರಿದರು. 

ರಿಷಬ್ ಪಂತ್ 8, ಅಶ್ವಿನ್ 4, ಶಾರ್ದೂಲ್ 4, ಮೊಹಮ್ಮದ್ ಶಮಿ 8 ರನ್ ಗಳಿಸಿ ಔಟಾದರು. ಇನ್ನು ಕೊನೆಯಲ್ಲಿ ಬುಮ್ರಾ 14 ಸೇರಿದ್ದು ತಂಡ 300ರ ಗಡಿ ದಾಟಲು ಸಾಧ್ಯವಾಯಿತು. ದಕ್ಷಿಣ ಆಫ್ರಿಕಾ ಪರ ಲುಂಗಿ ಎನ್‌ಗಿಡಿ 6 ವಿಕೆಟ್ ಪಡೆದಿದ್ದರೆ, ಕಾಗಿಸೋ ರಬಾಡ 3 ವಿಕೆಟ್ ಹಾಗೂ ಮಾರ್ಕೊ ಜಾನ್ಸೆನ್ 1 ವಿಕೆಟ್ ಪಡೆದಿದ್ದಾರೆ. 

ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 197 ರನ್ ಗಳಿಗೆ ಸರ್ವಪತನಗೊಂಡಿದೆ. ಎಲ್ಗರ್ 1, ಮಾರ್ಕ್ರಾಮ್ 13, ಪೀಟರ್ ಸನ್ 15, ಟೆಂಬಾ 52, ಡಿಕಾಕ್ 34, ಮತ್ತು ಕಾಗಿಸೋ ರಬಾಡ 25 ರನ್ ಗಳಿಸಿದ್ದಾರೆ.

ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಮೊಹಮ್ಮದ್ ಶಮಿ 5, ಬುಮ್ರಾ ಮತ್ತು ಶಾರ್ದೂಲ್ ತಲಾ ಎರಡು ವಿಕೆಟ್ ಹಾಗೂ ಸಿರಾಜ್ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

ಭಾರತ ಇರಾನ್ ನ IRGC ಯನ್ನು ಉಗ್ರ ಸಂಘಟನೆಯೆಂದು ಘೋಷಿಸಲಿ: ಇಸ್ರೇಲ್ ಒತ್ತಾಯ

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

SCROLL FOR NEXT