ಭಾರತಕ್ಕೆ ಜಯ 
ಕ್ರಿಕೆಟ್

ಬಾಕ್ಸಿಂಗ್ ಡೇ ಟೆಸ್ಟ್: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 113 ರನ್ ಗಳ ಐತಿಹಾಸಿಕ ಜಯ, ಸರಣಿಯಲ್ಲಿ 1-0 ಮುನ್ನಡೆ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 113 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಸೆಂಚುರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 113 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಸೆಂಚುರಿಯನ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ನೀಡಿದ್ದ 305ರನ್ ಗಳ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 191ರನ್ ಗಳಿಗೆ ಆಲೌಟ್ ಆಗಿ ಭಾರತದ ಎದುರು 113ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು. ಅಂತೆಯೇ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ ಪಡೆ 1-0 ಮುನ್ನಡೆ ಸಾಧಿಸಿದೆ.

ಭಾರತ ನೀಡಿದ್ದ 305 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಭಾರತೀಯ ಬೌಲರ್ ಗಳ ಅಕ್ಷರಶಃ ಕಾಡಿದರು. ಡೀನ್ ಎಲ್ಗಾರ್ (77ರನ್) ಅವರ ಅರ್ಧಶತಕ ಮತ್ತು ಟೆಂಬಾ ಬವುಮಾ (36 ರನ್) ಸಮಯೋಚಿತ ಪ್ರದರ್ಶನದ ಹೊರತಾಗಿಯೂ ದಕ್ಷಿಣ ಆಫ್ರಿಕಾ ತಂಡ ಪಂದ್ಯವನ್ನು ಕೈ ಚೆಲ್ಲಿತು. ಪ್ರಮುಖವಾಗಿ ಭಾರತ ಮಹಮದ್ ಶಮಿ ಮತ್ತು ಜಸ್ ಪ್ರೀತ್ ಬುಮ್ರಾ ಆಫ್ರಿಕನ್ನರನ್ನು ಇನ್ನಿಲ್ಲದಂತೆ ಕಾಡಿದರು. ಇಬ್ಬರೂ ಬೌಲರ್ ಗಳು ತಲಾ 3 ವಿಕೆಟ್ ಪಡೆದರೆ, ಅಂತಿಮ ದಿನದ ಹೀರೋ ಆರ್ ಅಶ್ವಿನ್ ಅಂತಿಮ ಓವರ್ ನಲ್ಲಿ ಬ್ಯಾಕ್  ಟು ಬ್ಯಾಕ್ 2 ವಿಕೆಟ್ ಪಡೆದು ಆಫ್ರಿಕಾ ಇನ್ನಿಂಗ್ಸ್ ಗೆ ತೆರೆ ಎಳೆದು, ಭಾರತಕ್ಕೆ ಗೆಲುವು ತಂದುಕೊಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT