ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಏಕದಿನ ಸರಣಿ: ಮಿಥಾಲಿ ರಾಜ್ ಅದ್ಭುತ ಆಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್ ಜಯ, ಸರಣಿ ಇಂಗ್ಲೆಂಡ್ ಕೈವಶ!

ಆತಿಥೇಯ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿ ವೈಟ್ ವಾಶ್ ಮುಖಭಂಗದಿಂದ ತಪ್ಪಿಸಿಕೊಂಡಿದೆ.

ಮಿಥಾಲಿ ರಾಜ್
Vishwanath S
Updated On : 4 Jul 2021, 12:19 am

ವೋರ್ಸೆಸ್ಟರ್: ಆತಿಥೇಯ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿ ವೈಟ್ ವಾಶ್ ಮುಖಭಂಗದಿಂದ ತಪ್ಪಿಸಿಕೊಂಡಿದೆ. 

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ 2-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇಂಗ್ಲೆಂಡ್ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು. 

ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ 219 ರನ್ ಗಳಿಗೆ ಆಲೌಟ್ ಆಯಿತು. ನಂತರ ಟೀ ಇಂಡಿಯಾಗೆ ಓವರ್ ಕಡಿತಗೊಳಿಸಿ 47 ಓವರ್ ಗಳಲ್ಲಿ 220 ರನ್ ಗೆಲುವಿನ ಗುರಿ ನೀಡಲಾಯಿತು. 

Advertisement

Advertisement

ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕಿ ಮಿಥಾಲಿ ರಾಜ್ ಅಜೇಯ 75 ರನ್ ಸಿಡಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. ಇನ್ನು ಟೀಂ ಇಂಡಿಯಾ ಪರ ಶಫಾಲಿ ವರ್ಮಾ 19, ಸ್ಮೃತಿ ಮಂದಾನ 49 ಹಾಗೂ ನೇಹ ರಾಣಾ 24 ರನ್ ಗಳಿಸಿದ್ದಾರೆ. 

ಇಂಗ್ಲೆಂಡ್ ಪರ ಲೌರೆನ್ ವಿಂಡ್ ಫೀಲ್ಡ್ ಹಿಲ್ 36, ಹೇತರ್ ನೈಟ್ 46, ನಟ್ ಸ್ಕಿವರ್ 49 ರನ್ ಸಿಡಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments