ಕ್ರಿಕೆಟ್

ಮೈಲಿಗಲ್ಲು ಸೃಷ್ಟಿಸಿದ ಮಿಥಾಲಿ ರಾಜ್; ಎಲ್ಲಾ ಫಾರ್ಮೆಟ್​ನಲ್ಲಿ ಅತಿ ಹೆಚ್ಚು ರನ್ ಸಿಡಿಸಿದ ಅಗ್ರ ಆಟಗಾರ್ತಿ!

Vishwanath S

ವೋರ್ಸೆಸ್ಟರ್: ಭಾರತ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನ ಎಲ್ಲಾ ಫಾರ್ಮೆಟ್​ನಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ಅಗ್ರ ಆಟಗಾರ್ತಿ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಮಿಥಾಲಿ ಈ ಸಾಧನೆ ಮಾಡಿದ್ದಾರೆ. ಭಾರತದ ನಾಯಕಿ ಇಂಗ್ಲೆಂಡ್‌ನ ಮಾಜಿ ಆಟಗಾರ್ತಿ ಚಾರ್ಲೋಟ್ ಎಡ್ವರ್ಡ್ಸ್ ದಾಖಲೆಯನ್ನು ಹಿಂದಿಕ್ಕಿ ಮೈಲಿಗಲ್ಲು ಸೃಷ್ಟಿಸಿದ್ದಾರೆ. 

ಎಡ್ವರ್ಡ್ಸ್ ಎಲ್ಲಾ ಆವೃತ್ತಿಗಳು ಸೇರಿ ಒಟ್ಟಾರೆ 10,273 ಅಂತಾರಾಷ್ಟ್ರೀಯ ರನ್ ಗಳಿಸಿದ್ದಾರೆ.  ಚಾರ್ಲೊಟ್‌ರನ್ನು ಹಿಂದಿಕ್ಕಲು ಮಿಥಾಲಿಗೆ ಕೇವಲ 12 ರನ್‌ಗಳ ಅಗತ್ಯವಿತ್ತು.ಇಂಗ್ಲೆಂಡ್ ವಿರುದ್ಧ ಮೂರನೇ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿರುವ ಮೂಲಕ ಈ ದಾಖಲೆ ಬರೆದಿದ್ದಾರೆ. 

ಕಳೆದ ಮಾರ್ಚ್‌ನಲ್ಲಿ ಏಕದಿನ ಪಂದ್ಯಗಳಲ್ಲಿ 7,000 ರನ್ ಗಳಿಸಿದ ಮೊದಲ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಮಿಥಾಲಿ ಪಾತ್ರರಾಗಿದ್ದರು. 

38ರ ಹರೆಯದ  ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಏಕದಿನ ಪಂದ್ಯಗಳನ್ನಾಡಿದ್ದಾರೆ. ಅಲ್ಲದೆ ಮೂರು ಫಾರ್ಮೆಟ್​ನಲ್ಲಿ 10,000 ರನ್ ಗಳಿಸಿದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಮಿಥಾಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್ ಗಳಿಸಿದ ಎರಡನೇ ಆಟಗಾರ್ತಿ. ಇದಕ್ಕೂ ಮುನ್ನು ಚಾರ್ಲೋಟ್ ಎಡ್ವರ್ಡ್ಸ್ 10 ಸಾವಿರ ರನ್ ಗಡಿ ದಾಟಿದ್ದರು.

SCROLL FOR NEXT