ಕ್ರಿಕೆಟ್

ಮೊದಲ ಏಕದಿನ ಪಂದ್ಯ: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಆತಿಥೇಯ ಲಂಕಾ ಬ್ಯಾಟಿಂಗ್

Vishwanath S

ಕೊಲಂಬೋ: ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆತಿಥೇಯ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿದೆ.

ಕೊಲಂಬೋದ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು ಟೀಂ ಇಂಡಿಯಾ ಪರವಾಗಿ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ತಮ್ಮ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇನ್ನು ಭಾನುಕಾ ರಾಜಪಕ್ಸೆ ಶ್ರೀಲಂಕಾ ಪರ ತಮ್ಮ ಚೊಚ್ಚಲ 50 ಓವರ್ ಪಂದ್ಯವನ್ನು ಆಡಲಿದ್ದಾರೆ.

ಪ್ರಸ್ತುತ ಲಂಕಾ 12 ಓವರ್ ಮುಕ್ತಾಯಕ್ಕೆ 1 ವಿಕೆಟ್ ಕಳೆದುಕೊಂಡು 61 ರನ್ ಪೇರಿಸಿದೆ. 

ತಂಡಗಳು: 
ಟೀಂ ಇಂಡಿಯಾ: ಶಿಖರ್ ಧವನ್(ನಾಯಕ), ಪೃಥ್ವಿ ಶಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್.

ಶ್ರೀಲಂಕಾ: ದಾಸುನ್ ಶಾನಕಾ(ನಾಯಕ), ಅವಿಷ್ಕಾ ಫರ್ನಾಂಡೊ, ಮಿನೋಡ್ ಭನುಕಾ (ವಿಕೆಟ್ ಕೀಪರ್), ಭನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚಾರಿತ್ ಅಸಲಂಕಾ, ವನಿಂದು ಹಸರಂಗ, ಚಮಿಕಾ ಕರುಣರತ್ನ, ಇಸುರು ಉದನಾ, ದುಷ್ಮಂತಾ ಚಂದ್ರಕಮೀ.

SCROLL FOR NEXT