ಸೂರ್ಯಕುಮಾರ್-ಪೃಥ್ವಿ ಶಾ 
ಕ್ರಿಕೆಟ್

ಇಂಗ್ಲೆಂಡ್ ಪ್ರವಾಸ: ಲಂಡನ್‌ನಲ್ಲಿರುವ ಟೀಂ ಇಂಡಿಯಾ ತಂಡವನ್ನು ಸೇರಲಿರುವ ಸೂರ್ಯಕುಮಾರ್, ಪೃಥ್ವಿ ಶಾ!

ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು ಗಾಯಗೊಂಡಿರುವ ಆಟಗಾರರಾದ ಶುಬ್ಮನ್ ಗಿಲ್ ಮತ್ತು ವಾಷಿಂಗ್ಟನ್ ಸುಂದರ್‌ಗೆ ಬದಲಿಯಾಗಿ ಪೃಥ್ವಿ ಶಾ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರನ್ನು ಸೇರಿಸಿಕೊಳ್ಳಲಾಗಿದೆ.

ಲಂಡನ್: ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು ಗಾಯಗೊಂಡಿರುವ ಆಟಗಾರರಾದ ಶುಬ್ಮನ್ ಗಿಲ್ ಮತ್ತು ವಾಷಿಂಗ್ಟನ್ ಸುಂದರ್‌ಗೆ ಬದಲಿಯಾಗಿ ಪೃಥ್ವಿ ಶಾ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರನ್ನು ಸೇರಿಸಿಕೊಳ್ಳಲಾಗಿದೆ.

ಇನ್ನು ಹೆಚ್ಚುವರಿಯಾಗಿ ಬಂಗಾಳ ಆರಂಭಿಕ ಆಟಗಾರ ಅಭಿಮನ್ಯು ಈಶ್ವರನ್ ಅವರನ್ನು ಮುಖ್ಯ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಸ್ಟ್ಯಾಂಡ್ ಬೈ ಆಗಿದ್ದ ವೇಗಿ ಅವೇಶ್ ಖಾನ್ ಕೂಡ ಎಡಗೈ ಹೆಬ್ಬೆರಳಿ ಗಾಯದಿಂದಾಗಿ ಮನೆಗೆ ಮರಳಿದ್ದಾರೆ.

"ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಬದಲಿ ಆಟಗಾರರನ್ನಾಗಿ ಹೆಸರಿಸಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ತನ್ನ ಬಲಗೈ ಬೌಲಿಂಗ್ ಬೆರಳಿಗೆ ಚುಚ್ಚುಮದ್ದನ್ನು ತೆಗೆದುಕೊಂಡಿದ್ದಾರೆ. ಆದರೂ ಅವರ ಚೇತರಿಕೆ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ ಅವರ ಬೌಲಿಂಗ್-ಫಿಟ್ ಆಗಲ್ಲ. ಹೀಗಾಗಿ ಅವರನ್ನು ಟೂರ್ನಿಯಿಂದ ಕೈಬಿಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT