ಶ್ರೀಲಂಕಾ ತಂಡದ ಆಟಗಾರರನ್ನು ಅಭಿನಂದಿಸುತ್ತಿರುವ ಟೀಂ ಇಂಡಿಯಾ ನಾಯಕ ಶಿಖರ್ ಧವನ್ 
ಕ್ರಿಕೆಟ್

2ನೇ ಟಿ-20 ಪಂದ್ಯದಲ್ಲಿ ಭಾರತವನ್ನು ನಾಲ್ಕು ವಿಕೆಟ್ ಗಳಿಂದ ಮಣಿಸಿದ ಶ್ರೀಲಂಕಾ

ಪ್ರೇಮ್ ದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಉಭಯ ತಂಡಗಳು 1-1 ಅಂಕಗಳೊಂದಿಗೆ ಸಮಬಲ ಸಾಧಿಸಿವೆ.

ಕೊಲಂಬೊ: ಇಲ್ಲಿನ ಪ್ರೇಮ್ ದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಉಭಯ ತಂಡಗಳು 1-1 ಅಂಕಗಳೊಂದಿಗೆ ಸಮಬಲ ಸಾಧಿಸಿವೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು. ಟೀಂ ಇಂಡಿಯಾ ಪರ  ಋತುರಾಜ್ ಗಾಯಕ್ವಾಡ್, 21, ಶಿಖರ್ ಧವನ್ 40,  ದೇವದತ್ ಪಡ್ಡಿಕಲ್ 29, ನಿತೀಶ್ ರಾಣಾ 9 ರನ್ ಗಳಿಸಿದರು.

ಭಾರತ ನೀಡಿದ 132 ರನ್ ಗಳ ಗುರಿ ಬೆನ್ನಟ್ಟಿದ್ದ ಶ್ರೀಲಂಕಾ ತಂಡದ ಪರ ಅವಿಷ್ಕಾ ಫರ್ನಾಂಡೋ 11, ಮಿನೊದ್ ಬಾನುಕಾ 36, ಸದೀರಾ ಸಮರ ವಿಕ್ರಮ 8, ದಾಸೂನ್ ಶಾನಕಾ 3, ಧನಂಜಯ ಡಿ  ಸಿಲ್ವಾ 40 , ವಾನಿಂದು ಹಸರಂಗ 15, ರಮೇಶ್ ಮೆಂಡಿಸ್ 2, ಚಾಮಿಕಾ ಕರುಣರತ್ನೆ 12 ರನ್ ಗಳಿಸುವ ಮೂಲಕ ಶ್ರೀಲಂಕಾ ಆರು ವಿಕೆಟ್ ನಷ್ಟಕ್ಕೆ 133 ರನ್ ಕಲೆಹಾಕಿ ಗೆಲುವಿನ ನಗೆ ಬೀರಿತು. ಶ್ರೀಲಂಕಾ ಪರ 40 ರನ್ ಗಳಿಸಿದ ಧನಂಜಯ ಡಿ ಸಿಲ್ವಾ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್