ಯಜುವೇಂದ್ರ ಚಹಲ್-ಕೆ ಗೌತಮ್ 
ಕ್ರಿಕೆಟ್

ಶ್ರೀಲಂಕಾ ಪ್ರವಾಸ: ಭಾರತದ ಕ್ರಿಕೆಟಿಗರಾದ ಯಜುವೇಂದ್ರ ಚಹಲ್, ಕೆ ಗೌತಮ್ ಗೆ ಕೊರೋನಾ ಸೋಂಕು

ಶ್ರೀಲಂಕಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿದ್ದ ಟೀಂ ಇಂಡಿಯಾ ಆಟಗಾರರಾದ  ಯಜುವೇಂದ್ರ ಚಹಲ್, ಕೆ ಗೌತಮ್ ಅವರೂ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊಲಂಬೋ: ಶ್ರೀಲಂಕಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿದ್ದ ಟೀಂ ಇಂಡಿಯಾ ಆಟಗಾರರಾದ  ಯಜುವೇಂದ್ರ ಚಹಲ್, ಕೆ ಗೌತಮ್ ಅವರೂ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಸೋಂಕಿಗೆ ತುತ್ತಾಗಿ ಐಸೋಲೇಷನ್ ನಲ್ಲಿರುವ ಕೃಣಾಲ್ ಪಾಂಡ್ಯ ಅವರ ಸಂಪರ್ಕಕ್ಕೆ ಬಂದಿದ್ದ  ಮಂದಿ ಆಟಗಾರರಲ್ಲಿ ಭಾರತ ತಂಡದ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ಕೆ ಗೌತಮ್ ಕೂಡ ಇದ್ದರು. ಇದೀಗ ಈ ಇಬ್ಬರೂ ಆಟಗಾರರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಂಡದ ಮೂಲಗಳು ತಿಳಿಸಿವೆ.

ಕೃಣಾಲ್ ಪಾಂಡ್ಯ ಸಂಪರ್ಕಕ್ಕೆ ಬಂದಿದ್ದ 8 ಮಂದಿ ಆಟಗಾರರ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ ಕೃಣಾಲ್ ಪಾಂಡ್ಯಾ ಸಹೋದರ ಹಾರ್ದಿಕ್ ಪಾಂಡ್ಯ, ಮನೀಷ್ ಪಾಂಡೆ, ದೀಪಕ್ ಚಹರ್, ಇಶಾನ್ ಕಿಶನ್ ಅವರ ಕೋವಿಡ್ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಹೀಗಾಗಿ ಅವರು ಭಾರತಕ್ಕೆ ಹಿಂದಿರುಗಲಿದ್ದಾರೆ. ಆದರೆ ಪೃಥ್ವಿ ಶಾ ಮತ್ತು ಸೂರ್ಯ ಕುಮಾರ್ ಯಾದವ್ ಶ್ರೀಲಂಕಾದಿಂದ ನೇರವಾಗಿ ಇಂಗ್ಲೆಂಡ್ ಹಾರಲಿದ್ದು, ಅಲ್ಲಿ ಕೊಹ್ಲಿ ಪಡೆಯನ್ನು ಸೇರಲಿದ್ದಾರೆ. ಇದಕ್ಕೂ ಮೊದಲು ಇಬ್ಬರೂ ಆಟಗಾರರು ಐಸೊಲೇಷನ್ ಪೂರೈಸಬೇಕಿದೆ.

ಆದರೆ ಈಗ ಸೋಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ಯಜುವೇಂದ್ರ ಚಹಲ್, ಮತ್ತು ಕೆ ಗೌತಮ್ ಕೊಲಂಬೋದಲ್ಲಿರುವ ಕೋವಿಡ್ ಕೇಂದ್ರದಲ್ಲಿ ಕೃಣಾಲ್ ಪಾಂಡ್ಯ ಅವರೊಂದಿಗೆ ಐಸೊಲೇಷನ್ ನಲ್ಲಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!