ಐಪಿಎಲ್ 2021 
ಕ್ರಿಕೆಟ್

ಯುಎಇಯಲ್ಲಿ ಸೆ.19 ರಿಂದ 14ನೇ ಆವೃತ್ತಿಯ ಐಪಿಎಲ್ ಪುನರಾರಂಭ; ಅಕ್ಟೋಬರ್ 15ಕ್ಕೆ ಫೈನಲ್!

ಕೊರೋನಾ ಕಾರಣದಿಂದ ಅರ್ಧಕ್ಕೆ ನಿಲ್ಲಿಸಲಾಗಿದ್ದ ಐಪಿಎಲ್ 2021 ಆವೃತ್ತಿಯನ್ನು ಪುನರಾರಂಭಿಸಲು ಸಿದ್ದತೆ ನಡೆಯುತ್ತಿದ್ದು ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಆರಂಭವಾಗಲಿದೆ. 

ಮುಂಬೈ: ಕೊರೋನಾ ಕಾರಣದಿಂದ ಅರ್ಧಕ್ಕೆ ನಿಲ್ಲಿಸಲಾಗಿದ್ದ ಐಪಿಎಲ್ 2021 ಆವೃತ್ತಿಯನ್ನು ಪುನರಾರಂಭಿಸಲು ಸಿದ್ದತೆ ನಡೆಯುತ್ತಿದ್ದು ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಆರಂಭವಾಗಲಿದೆ. 

ಭಾರತದಲ್ಲಿ ಕೊರೋನಾ ಪಿಡುಗು ಕಡಿಮೆಯಾಗದ ಕಾರಣ ಯುಎಇಯಲ್ಲಿ ಐಪಿಎಲ್ ನ ಉಳಿದ ಪಂದ್ಯಗಳನ್ನು ನಡೆಸಲು ಬಿಸಿಸಿಐ ನಿರ್ಧರಿಸಿದೆ. ಇದರಿಂದ ಈ ಆವೃತ್ತಿಯ ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್ 19 ರಿಂದ ದುಬೈ, ಅಬುಧಾಬಿ ಹಾಗೂ ಶಾರ್ಜಾದಲ್ಲಿ ಆಯೋಜಿಸಲಾಗುವುದು ಎಂದು ಬಿಸಿಸಿಐ ಪ್ರಕಟಿಸಿದೆ. 

ಈ ವರ್ಷದ ಐಪಿಎಲ್ ಫೈನಲ್ ಅಕ್ಟೋಬರ್ 15ರಂದು ನಡೆಯಲಿದೆ ಎಂಬ ಅಂಶವೂ ಬಹಿರಂಗವಾಗಿದೆ. 25 ದಿನಗಳ ಒಳಗೆ ಟೂರ್ನಿಯನ್ನು ಮುಗಿಸಲು ಕ್ರಿಕೆಟ್ ಮಂಡಳಿ ಉತ್ಸುಕವಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಇನ್ನು ಕೆಲ ವಿದೇಶಿ ಆಟಗಾರರು ಈ ಬಾರಿಯ ಐಪಿಎಲ್ ನಿಂದ ಹೊರಹೋಗಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ ನಾವು ವಿದೇಶಿ ಆಟಗಾರರನ್ನು ಸಂಪರ್ಕಿಸಿ ಮಾತುಕತೆ ನಡೆಸುತ್ತಿದ್ದೇವೆ. ಮಾತುಕತೆಗಳು ಫಲ ನೀಡಿದರೆ ವಿದೇಶಿ ಆಟಗಾರರು ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲದಿದ್ದರೆ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇವೆ. 

ಇನ್ನು 2020ರ ಐಪಿಎಲ್ ಸಹ ರದ್ದಾಗಿದ್ದು ಈ ವೇಳೆ ಟೂರ್ನಿಯನ್ನು ಬಯೋ-ಬಬಲ್ ನಲ್ಲಿ ಯುಎಇಯಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT