ಕ್ರಿಕೆಟ್

ಐಸಿಸಿ ಟೆಸ್ಟ್ ರ್ಯಾಂಕಿಂಗ್: 5ನೇ ಸ್ಥಾನದಲ್ಲಿ ಕೊಹ್ಲಿ ಮುಂದುವರಿಕೆ, ಜಂಟಿ 6ನೇ ಸ್ಥಾನದಲ್ಲಿ ರೋಹಿತ್-ರಿಷಬ್ ಪಂತ್

Srinivasamurthy VN

ದುಬೈ: ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಐಸಿಸಿ ತನ್ನ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿ ಕೊಹ್ಲಿ ಮುಂದುವರೆದಿದ್ದಾರೆ.

ಹೌದು.. ಐಸಿಸಿ ಟೆಸ್ಟ್ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಟೆಸ್ಟ್ ಬ್ಯಾಟಿಂಗ್‌ ರ‍್ಯಾಂಕಿಂಗ್‌ನಲ್ಲಿ ಐದನೇ ಸ್ಥಾನವನ್ನು ಉಳಿಸಿಕೊಂಡರೆ, ರೋಹಿತ್ ಶರ್ಮಾ ಹಾಗೂ ರಿಷಬ್ ಪಂತ್ ಜಂಟಿ ಆರನೇ ಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಟ್‌ ತಂಡದ ನಾಯಕ ಕೇನ್‌ ವಿಲಿಯಮ್ಸನ್‌ 895 ಪಾಯಿಂಟ್ಸ್‌ಗಳೊಂದಿಗೆ ಆಗ್ರಸ್ಥಾನದಲ್ಲಿದ್ದು, ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್‌ (891), ಮಾರ್ನಸ್‌ ಲಾಬುಶೇನ್‌ (878), ಜೋ ರೂಟ್ (836) ಕ್ರಮವಾಗಿ ಎರಡು, ಮೂರು, ನಾಲ್ಕನೇ ಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾ ನಾಯಕ ನಾಯಕ ವಿರಾಟ್‌  ಕೊಹ್ಲಿ 814 ಪಾಯಿಂಟ್ಸ್‌ಗಳೊಂದಿಗೆ 5ನೇ ಸ್ಥಾನದಲ್ಲಿದ್ದರೆ, ಭಾರತದ ವಿರುದ್ಧ ಫೈನಲ್ ಆಡುತ್ತಿರುವ ನ್ಯೂಜಿಲೆಂಡ್‌ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೇ ಚೊಚ್ಚಲ ಟೆಸ್ಟ್‌ ಪಂದ್ಯದಲ್ಲಿ ದ್ವಿಶತಕ ಸಿಡಿಸಿ 895 ಪಾಯಿಂಟ್ಸ್‌ಗಳೊಂದಿಗೆ ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ 77ನೇ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.

ಇನ್ನು ಟೆಸ್ಟ್ ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ ಭಾರತದ ಹಿರಿಯ ಸ್ಪಿನ್ನರ್ ಆರ್.ಅಶ್ವಿನ್ ಎರಡನೇ ಸ್ಥಾನದಲ್ಲಿ (850 ಪಾಯಿಂಟ್ಸ್‌) ಮುಂದುವರೆದಿದ್ದಾರೆ. ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮಿನ್ಸ್‌ (908 ಪಾಯಿಂಟ್) ಆಗ್ರಸ್ಥಾನದಲ್ಲಿದ್ದು, ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್‌ 423 ಪಾಯಿಂಟ್ಸ್‌ಗಳೊಂದಿಗೆ  ಟೆಸ್ಟ್ ಆಲ್‌ರೌಂಡರ್ ರ‍್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಭಾರತದ ರವೀಂದ್ರ ಜಡೇಜಾ (386 ಪಾಯಿಂಟ್ಸ್‌) ಮತ್ತು ಅಶ್ವಿನ್ (353) ಕ್ರಮವಾಗಿ ಎರಡನೇ ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯವು ಸೌತಾಂಪ್ಟನ್‌ನಲ್ಲಿ ಜೂನ್ 18ರಿಂದ 22ರ ವರೆಗೆ ನಡೆಯಲಿದೆ. 
 

SCROLL FOR NEXT