ಬಿ ವಿಜಯಕೃಷ್ಣ 
ಕ್ರಿಕೆಟ್

ಕರ್ನಾಟಕ ಮಾಜಿ ಎಡಗೈ ಸ್ಪಿನ್ನರ್ ಬಿ. ವಿಜಯಕೃಷ್ಣ ನಿಧನ

ಕರ್ನಾಟಕದ ಮಾಜಿ ಕ್ರಿಕೆಟಿಗ, ಡಗೈ ಸ್ಪಿನ್ನರ್ ಬಿ. ವಿಜಯಕೃಷ್ಣ (71) ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ನಿಧನರಾದರು.

ಬೆಂಗಳೂರು: ಕರ್ನಾಟಕದ ಮಾಜಿ ಕ್ರಿಕೆಟಿಗ, ಡಗೈ ಸ್ಪಿನ್ನರ್ ಬಿ. ವಿಜಯಕೃಷ್ಣ (71) ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ನಿಧನರಾದರು.

ರಣಜಿ ಕ್ರಿಕೆಟ್ ನ ಖ್ಯಾತಿಯ ವಿಜಯಕೃಷ್ಣ ಬಹು ಅಂಗಾಂಗಗಳ ವೈಫಲ್ಯದಿಂದ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. 

ಕುಮಾರ ಪಾರ್ಕ್ ನಲ್ಲಿ ವಾಸಿಸುತ್ತಿದ್ದ ಮೃತರ ಅಂತ್ಯಕ್ರಿಯೆ ಇಂದು 4 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಲಿದೆ

ವಿಜಯಕೃಷ್ಣ 15 ವರ್ಷಗಳ ಕ್ರಿಕೆಟ್ ಜೀವನದಲ್ಲಿ ಆಲ್ ರೌಂಡರ್ ಎನಿಸಿದ್ದು 198 ವಿಕೆಟ್ ಹಾಗೂ ಸುಮಾರು 2000 ರನ್ ಗಳನ್ನು ಗಳಿಸಿದ್ದರು.

ಮುಖ್ಯಮಂತ್ರಿ ಸಂತಾಪ

ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕ 2 ಬಾರಿ ರಣಜಿ ಟ್ರೋಫಿ ಗೆಲ್ಲುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ನಿಧನದಿಂದ ನಾಡು ಒಬ್ಬ ಅತ್ಯುತ್ತಮ ಕ್ರಿಕೆಟ್ ಆಟಗಾರನನ್ನು ಕಳೆದುಕೊಂಡಂತಾಗಿದೆ.

ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭಾರತದಲ್ಲಿ ಬಂಡವಾಳ ಕೇವಲ ಬೆಳೆಯುವುದಲ್ಲ, ಅದು ದುಪ್ಪಟ್ಟಾಗುತ್ತದೆ: India-Japan Economic Forum ನಲ್ಲಿ ಪ್ರಧಾನಿ ಮೋದಿ ಮಾತು

ಉತ್ತರಾಖಂಡದಲ್ಲಿ ಮೇಘಸ್ಫೋಟ; ಚಮೋಲಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋದ ದಂಪತಿ, ಅವಶೇಷಗಳಡಿಯಲ್ಲಿ ಹೂತುಹೋದ ಜಾನುವಾರುಗಳು-Video

ಟ್ರಂಪ್ ಆರೋಗ್ಯ ಕುರಿತು ಊಹಾಪೋಹ: ತುರ್ತು ಪರಿಸ್ಥಿತಿ ಎದುರಾದರೆ ಅಧ್ಯಕ್ಷನಾಗಲು ಸಿದ್ಧ ಎಂದ ಜೆಡಿ ವ್ಯಾನ್ಸ್

India-Japan Annual Summit 2025: ಟೋಕಿಯೋ ತಲುಪಿದ ಪ್ರಧಾನಿ ಮೋದಿ, ಅದ್ಧೂರಿ ಸ್ವಾಗತ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ: ಒಲಿಂಪಿಕ್ಸ್ ಪದಕ ಗೆದ್ದರೆ 5 ಕೋಟಿ ನಗದು; CM

SCROLL FOR NEXT