ಕ್ರಿಕೆಟ್

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್: ಎಂಎಸ್ ಧೋನಿ ದಾಖಲೆ ಮುರಿದ ವಿರಾಟ್ ಕೊಹ್ಲಿ

Vishwanath S

ನವದೆಹಲಿ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಟಾಸ್ ಬೆನ್ನಲ್ಲೇ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. 

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುವ ಮೂಲಕ ಕೊಹ್ಲಿ ಈ ದಾಖಲೆ ಮಾಡಿದ್ದಾರೆ. ಧೋನಿ 60 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರೆ ವಿರಾಟ್ ಕೊಹ್ಲಿ 61ನೇ ಪಂದ್ಯಕ್ಕೆ ನಾಯಕತ್ವ ವಹಿಸಿದ್ದಾರೆ. 

ಇನ್ನು ಕೊಹ್ಲಿ 61 ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದು 36 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಇನ್ನು ಧೋನಿ 60 ಪಂದ್ಯಗಳ ಪೈಕಿ 27 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರು. 

2014ರಲ್ಲಿ ಎಂಎಸ್ ಧೋನಿ ಟೆಸ್ಟ್ ಆವೃತ್ತಿಗೆ ದಿಢೀರ್ ನಿವೃತ್ತಿ ಘೋಷಿಸಿದ್ದರು. ಅಂದಿನಿಂದ ಟೆಸ್ಟ್ ತಂಡವನ್ನು ಕೊಹ್ಲಿ ಮುನ್ನಡೆಸುತ್ತಾ ಬಂದಿದ್ದರು. 

ಇನ್ನು ಏಷ್ಯಾ ದೇಶಗಳಲ್ಲಿ ಅತೀ ಹೆಚ್ಚು ಸಮಯಕ್ಕೆ ಟೆಸ್ಟ್ ನಾಯಕತ್ವ ವಹಿಸಿದ ಖ್ಯಾತಿಗೂ ಕೊಹ್ಲಿ ಭಾಜನರಾಗಿದ್ದಾರೆ. ಹೌದು ಲಂಕಾದ ಅರ್ಜುನ್ ರಣತುಂಗಾ ಮತ್ತು ಪಾಕಿಸ್ತಾನದ ಮಿಸ್ಬಾ ಉಲ್ ಹಕ್ ಇಬ್ಬರೂ 56 ಪಂದ್ಯಗಳಿಗೆ ನಾಯಕತ್ವ ವಹಿಸಿದ್ದರು. 

SCROLL FOR NEXT