ರೋಹಿತ್-ಗಿಲ್ ಆಟ 
ಕ್ರಿಕೆಟ್

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ಭಾರತಕ್ಕೆ ಆರಂಭಿಕ ಆಘಾತ, ಭೋಜನ ವಿರಾಮದ ವೇಳೆಗೆ 69-2

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ತಂಡ ಆರಂಭಿಕ ಆಘಾತ ಎದುರಿಸಿದ್ದು, ಭೋಜನ ವಿರಾಮದ ವೇಳೆಗೆ 2 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿದೆ.

ಸೌಥ್ಯಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ತಂಡ ಆರಂಭಿಕ ಆಘಾತ ಎದುರಿಸಿದ್ದು, ಭೋಜನ ವಿರಾಮದ ವೇಳೆಗೆ 2 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿದೆ.

ರೋಸ್ ಬೌಲ್ ನ ಸೌಥ್ಯಾಂಪ್ಟನ್ ಕ್ರೀಡಾಂಗಣದಲ್ಲಿ ನಿನ್ನೆ ಆರಂಭವಾಗಬೇಕಿದ್ದ ಪಂದ್ಯ ಮಳೆಯಿಂದಾಗಿ ಆರಂಭವಾಗಿರಲಿಲ್ಲ. ಇಂದು ಆರಂಭವಾದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲ ಇನ್ನಿಂಗ್ಸ್ ನಲ್ಲಿ ಆಡುತ್ತಿರುವ ಭಾರತ ತಂಡ ಆರಂಭಿಕ ಆಘಾತ ಎದುರಿಸಿದ್ದು, ಭೋಜನ ವಿರಾಮದ ವೇಳೆಗೆ 69 ರನ್ ಗಳಿಸಿ 2 ವಿಕೆಟ್ ಕಳೆದುಕೊಂಡಿದೆ.

ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ(34 ರನ್) ಮತ್ತು ಶುಭ್ ಮನ್ ಗಿಲ್ (28 ರನ್) ಉತ್ತಮ ಜೊತೆಯಾಟದ ಭರವಸೆ ಮೂಡಿಸಿದರು. ಆದರೆ ಜೇಮಿಸನ್ ಎಸೆದ ಇನ್ನಿಂಗ್ಸ್ ನ 21 ಓವರ್ ನ ಮೊದಲ ಎಸೆತದಲ್ಲೇ 34 ರನ್ ಗಳಿಸಿದ್ದ ರೋಹಿತ್ ಶರ್ಮಾ ಸೌಥಿಗೆ ಕ್ಯಾಚ್ ನೀಡಿ ಹೊರ ನಡೆದರು. ಇದರ ಬೆನ್ನಲ್ಲೇ 28 ರನ್ ಗಳಿಸಿದ್ದ ಗಿಲ್ ಕೂಡ ವಾಗ್ನರ್ ಬೌಲಿಂಗ್ ನಲ್ಲಿ ಔಟ್ ಆದರು.

ಈ ಹೊತ್ತಿಗೆ ಕ್ರೀಸ್ ಗೆ ಆಗಮಿಸಿದ್ದ ಚೇತೇಶ್ವರ ಪೂಜಾರ ಶೂನ್ಯ ಮತ್ತು ನಾಯಕ ವಿರಾಟ್ ಕೊಹ್ಲಿ 6 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇನ್ನು ನ್ಯೂಜಿಲೆಂಡ್ ಪರ ಜೇಮಿಸನ್ ಮತ್ತು ವಾಗ್ನರ್ ತಲಾ 1 ವಿಕಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!