ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 
ಕ್ರಿಕೆಟ್

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್: 4ನೇ ದಿನದಾಟಕ್ಕೆ ಮಳೆ ಅಡ್ಡಿ, ಪಂದ್ಯ ಸ್ಥಗಿತ

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ನಾಲ್ಕನೇ ದಿನದಾಟಕ್ಕೂ ಮಳೆ ಅಡ್ಡಿಯಾಗಿದ್ದು ಪಂದ್ಯ ಸ್ಥಗಿತಗೊಂಡಿದೆ.

ಸೌತಾಂಪ್ಟನ್ : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ನಾಲ್ಕನೇ ದಿನದಾಟಕ್ಕೂ ಮಳೆ ಅಡ್ಡಿಯಾಗಿದ್ದು ಪಂದ್ಯ ಸ್ಥಗಿತಗೊಂಡಿದೆ. 

ನ್ಯೂಜಿಲ್ಯಾಂಡ್ ಮತ್ತು ಟೀಂ ಇಂಡಿಯಾ ನಡುವಿನ ಪಂದ್ಯದಲ್ಲಿ ಮೊದಲು ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 217 ರನ್ ಗಳಿಗೆ ಆಲೌಟ್ ಆಯಿತು. ನಂತರ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲ್ಯಾಂಡ್ 2 ವಿಕೆಟ್ ನಷ್ಟಕ್ಕೆ 101 ರನ್ ಬಾರಿಸಿದೆ. 

ಮೂರನೇ ದಿನದಾಟಕ್ಕೆ ನ್ಯೂಜಿಲ್ಯಾಂಡ್ 101 ರನ್ ಬಾರಿಸಿತ್ತು. ನಾಲ್ಕನೇ ದಿನದಾಟ ಆರಂಭಕ್ಕೂ ಮುನ್ನವೇ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ. 

ನ್ಯೂಜಿಲ್ಯಾಂಡ್ ಪರ ಟಾಮ್ ಲ್ಯಾಥಮ್ 30 ಮತ್ತು ಡಿವೋನ್ ಕೊನ್ವಾಯ್ 54 ರನ್ ಬಾರಿಸಿದ್ದಾರೆ. ಕೇನ್ ವಿಲಿಯಮ್ಸನ್ ಅಜೇಯ 12 ರನ್ ಮತ್ತು ರಾಸ್ ಟೇಲರ್ ಅಜೇಯರಾಗಿದ್ದು ಐದನೇ ದಿನದಾಟ ಪ್ರಾರಂಭಿಸಲಿದ್ದಾರೆ. 

ಇನ್ನು ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 34, ಶುಭ್ಮನ್ ಗಿಲ್ 28, ವಿರಾಟ್ ಕೊಹ್ಲಿ 44, ಅಂಜಿಕ್ಯ ರಹಾನೆ 49 ಮತ್ತು ರವಿಚಂದ್ರನ್ ಅಶ್ವಿನ್ 22 ರನ್ ಬಾರಿಸಿದ್ದಾರೆ. 

ನ್ಯೂಜಿಲ್ಯಾಂಡ್ ಪರ ಬೌಲಿಂಗ್ ನಲ್ಲಿ ಕೇಲ್ ಜೇಮಿಸನ್ 5, ವಾಗ್ನರ್ ಮತ್ತು ಟ್ರಿಂಟ್ ಬೌಲ್ಟ್ ತಲಾ 2 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!