ಟೀಂ ಇಂಡಿಯಾ 
ಕ್ರಿಕೆಟ್

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್: ಸೋಲಿನ ಸುಳಿಯಲ್ಲಿ ಟೀಂ ಇಂಡಿಯಾ; ಕಿವೀಸ್ ಗೆಲುವಿಗೆ 139 ರನ್ ಗುರಿ

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿದೆ. 

ಸೌತಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿದೆ. 

ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಕೇವಲ 170 ರನ್ ಗಳಿಗೆ ಆಲೌಟ್ ಆಗುವ ಮೂಲಕ ನ್ಯೂಜಿಲ್ಯಾಂಡ್ ಗೆ 139 ರನ್ ಗಳ ಗುರಿ ನೀಡಿದೆ. 

ಇನ್ನು 139 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ 33 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡಿದೆ. ಪಂದ್ಯದ ಕೊನೆಯ ದಿನವಾದ ಇಂದು ನ್ಯೂಜಿಲ್ಯಾಂಡ್ 36 ಓವರ್ ಗಳಲ್ಲಿ ಗೆಲುವಿಗೆ 95 ರನ್ ಹೊಡೆಯಬೇಕಿದೆ. 

ನ್ಯೂಜಿಲ್ಯಾಂಡ್ ಪರ ಡಿವೋನ್ ಕಾನ್ವೇ ಅಜೇಯ 19 ಮತ್ತು ಕೇನ್ ವಿಲಿಯಮ್ಸನ್ ಅಜೇಯ 6 ರನ್ ಬಾರಿಸಿ ಆಡುತ್ತಿದ್ದಾರೆ. ಪ್ರಸ್ತುತ ನ್ಯೂಜಿಲ್ಯಾಂಡ್ 17 ಓವರ್ ಗಳಲ್ಲಿ 44 ರನ್ ಬಾರಿಸಿ ಆಡುತ್ತಿದೆ. 

ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 217 ರನ್ ಬಾರಿಸಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲ್ಯಾಂಡ್ 249 ರನ್ ಗಳಿಗೆ ಆಲೌಟ್ ಆಗಿದ್ದು 32 ರನ್ ಗಳ ಮುನ್ನಡೆ ಸಾಧಿಸಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 170 ರನ್ ಗಳಿಗೆ ಆಲೌಟ್ ಆಗಿದ್ದು ನ್ಯೂಜಿಲ್ಯಾಂಡ್ ಗೆ 139 ರನ್ ಗಳ ಗುರಿ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು; ಪ್ರತಿಭಟಿಸುವುದಾದರೇ ಸದನದ ಬಾವಿಗೆ ಬನ್ನಿ: ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!