ಕಾಲಿನ ಗಾಯ: ಶ್ರೀಲಂಕಾ ಸರಣಿಯಿಂದ ಜೋಸ್ ಬಟ್ಲರ್ ಔಟ್!
ಇಂಗ್ಲೇಂಡ್ ತಂಡದ ವಿಕೆಟ್ ಕೀಪರ್ ಜೋಸ್ ಬಟ್ಲರ್ ಕಾಲಿಗೆ ಗಾಯವಾಗಿರುವುದರಿಂದ ಇಂಗ್ಲೆಂಡ್-ಲಂಕಾ ತಂಡದ ಏಕದಿನ ಸರಣಿಯಿಂದ ದೂರ ಉಳಿಯಲಿದ್ದಾರೆ.
ಲಂಡನ್: ಇಂಗ್ಲೇಂಡ್ ತಂಡದ ವಿಕೆಟ್ ಕೀಪರ್ ಜೋಸ್ ಬಟ್ಲರ್ ಕಾಲಿಗೆ ಗಾಯವಾಗಿರುವುದರಿಂದ ಇಂಗ್ಲೆಂಡ್-ಲಂಕಾ ತಂಡದ ಏಕದಿನ ಸರಣಿಯಿಂದ ದೂರ ಉಳಿಯಲಿದ್ದಾರೆ.
ಜೂ.23 (ಬುಧವಾರ) ಮೊದಲ ಟಿ20 ಪಂದ್ಯದಲ್ಲಿ ಜೋಸ್ ಬಟ್ಲರ್ ಕಾಲಿನ ಸ್ನಾಯು ಛಿದ್ರವಾಗಿರುವುದು ವೈದ್ಯಕೀಯ ಪರೀಕ್ಷೆ ವೇಳೆ ಪತ್ತೆಯಾಗಿದೆ ಎಂದು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ಹೇಳಿದೆ. ಪಂದ್ಯದ ಅಂತ್ಯದ ವೇಳೆಗೆ ಬಟ್ಲರ್ ಗೆ ಬಿಗಿತ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ಈ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗೆಲುವು ಸಾಧಿಸಿತ್ತು.
ಯಾರ್ಕ್ಷೈರ್ ಬ್ಯಾಟ್ಸ್ಮನ್ ಡೇವಿಡ್ ಮಲನ್ ಮುಂಬರುವ ಅಂತಾರಾಷ್ಟ್ರೀಯ ಸರಣಿಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.