ಕೊರೋನಾ: ತಾಯಿ ಬಳಿಕ ಸೋದರಿಯನ್ನೂ ಕಳೆದುಕೊಂಡ ಟೀಂ ಇಂಡಿಯಾ ಕ್ರಿಕೆಟ್ ತಾರೆ ವೇದಾ ಕೃಷ್ಣಮೂರ್ತಿ
ಭಾರತೀಯ ಮಹಿಳಾ ಕ್ರಿಕೆಟ್ ತಾರೆ ವೇದಾ ಕೃಷ್ಣಮೂರ್ತಿಯವರ ಸೋದರಿ ವತ್ಸಲಾ ಶಿವಕುಮಾರ್ (42) ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಾರೆ ವೇದಾ ಕೃಷ್ಣಮೂರ್ತಿಯವರ ಸೋದರಿ ವತ್ಸಲಾ ಶಿವಕುಮಾರ್ (42) ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ವೇದಾ ಕೃಷ್ಣಮೂರ್ತಿಯವರ ಸೋದರಿ ವತ್ಸಲಾ ಇಂದು ಕೊನೆಯುಸಿರೆಳೆದಿದ್ದಾರೆ.
ಇದಕ್ಕೆ ಕೆಲವೇ ದಿನಗಳ ಹಿಂದೆ ವೇದಾ ಅವರ ತಾಯಿ ಚೆಲುವಾಂಬ (63) ಕೊರೋನಾಗೆ ಬಲಿಯಾಗಿದ್ದರು. ಇದೀಗ ಸೋದರಿ ಕೂಡ ಪ್ರಾಣ ಬಿಟ್ಟಿದ್ದು ವೇದಾ ಅವರ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.