ರೋಹಿತ್ ಶರ್ಮಾ ಬ್ಯಾಟಿಂಗ್ ವೈಖರಿ 
ಕ್ರಿಕೆಟ್

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಆರ್ಭಟ, ದಾಖಲೆ ಬರೆದ ಭಾರತ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಆಫ್ಧಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ ಟೀಂ ಇಂಡಿಯಾ ದಾಖಲೆ ನಿರ್ಮಾಣ ಮಾಡಿದೆ.

ಅಬುದಾಬಿ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಆಫ್ಧಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ ಟೀಂ ಇಂಡಿಯಾ ದಾಖಲೆ ನಿರ್ಮಾಣ ಮಾಡಿದೆ.

ಹೌದು.. ಇಂದು ಅಬುದಾಬಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆಫ್ಗನ್ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಬ್ಯಾಟ್ಸಮನ್ ಗಳು ನಿಗದಿತ 20 ಓವರ್  ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ ಬರೊಬ್ಬರಿ 210 ರನ್ ಗಳನ್ನು ಕಲೆ ಹಾಕಿದರು. ಇದು ಭಾರತದ ಪರ ದಾಖಲೆಯಾಗಿದ್ದು, ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ದಾಖಲಿಸಿದ 2ನೇ ಗರಿಷ್ಠ ಸ್ಕೋರ್ ಆಗಿದೆ.

ಈ ಹಿಂದೆ ಅಂದರೆ 2007ರಲ್ಲಿ ಡರ್ಬನ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ 218/4 ಗಳಿಸಿತ್ತು. ಇದು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಗಳಿಸಿದ ಗರಿಷ್ಠ ಮೊತ್ತವಾಗಿ ಉಳಿದಿದೆ. ನಂತರದ ಸ್ಥಾನದಲ್ಲಿ ಇಂದಿನ ಪಂದ್ಯವಿದ್ದು, ಇಲ್ಲಿ ಭಾರತ ಆಫ್ಘನ್ ವಿರುದ್ಧ 210/2 ರನ್ ಗಳಿಸಿದೆ. 

2016ರಲ್ಲಿ ಮುಂಬೈ ನಲ್ಲಿ ವಿಂಡೀಸ್ ವಿರುದ್ಧದ ಪಂದ್ಯ 3ನೇ ಸ್ಥಾನದಲ್ಲಿದ್ದು, ಆ ಪಂದ್ಯದಲ್ಲಿ ಭಾರತ 192 ರನ್ ಕಲೆ ಹಾಕಿತ್ತು.  ನಾಲ್ಕನೇ ಸ್ಥಾನದಲ್ಲಿ 2007ರಲ್ಲಿ ಡರ್ಬನ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯವಿದ್ದು, ಇಲ್ಲಿ ಭಾರತ 188ರನ್ ಕಲೆಹಾಕಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!