ಕ್ರಿಕೆಟ್

ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ; 'ಈ ಸಾಧನೆ ಮಾಡಿದ ವಿಶ್ವದ 3ನೇ ತಂಡ' ಭಾರತ, ಯಾವುದು ಆ ದಾಖಲೆ?

Srinivasamurthy VN

ದುಬೈ: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಅತೀ ಹೆಚ್ಚು ಎಸೆತ ಇರುವಂತೆಯೇ ಜಯ ಗಳಿಸಿದ ಮೂರನೇ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ ಕೇವಲ 6.3 ಓವರ್ ನಲ್ಲಿ 2 ವಿಕೆಟ್ ಕಳೆದುಕೊಂಡು 89ರನ್ ಗಳಿಸಿ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಆ ಮೂಲಕ ಇನ್ನೂ 81 ಎಸೆತಗಳು ಬಾಕಿ ಇರುವಂತೆಯೇ ಭಾರತ ತಂಡ ಪಂದ್ಯ ಜಯಿಸಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇದಕ್ಕೂ ಮೊದಲು ಅಂದರೆ ಅತೀ ಹೆಚ್ಚು ಎಸೆತಗಳಿರುವಂತೆಯೇ ಜಯಗಳಿಸಿದ ತಂಡಗಳ ಪಟ್ಟಿಯಲ್ಲಿ ಶ್ರೀಲಂಕಾ ಅಗ್ರಸ್ಥಾನದಲ್ಲಿದ್ದು, 2014ರಲ್ಲಿ ಚಿತ್ತಗಾಂಗ್ ನಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡ ನೆದರ್ಲೆಂಡ್ ವಿರುದ್ಧ ಇನ್ನೂ 90 ಎಸೆತ ಇರುವಂತೆಯೇ ಜಯಗಳಿಸಿತ್ತು. ಇದು ಟಿ20 ವಿಶ್ವಕಪ್ ನಲ್ಲಿ ದಾಖಲಾದ ಅತೀ ವೇಗದ ಜಯ ಎಂಬ ಕೀರ್ತಿಗೆ ಭಾಜನವಾಗಿದೆ.

ಇನ್ನು 2ನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡವಿದ್ದು, ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ದುಬೈನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಆಸ್ಟ್ರೇಲಿಯಾ ತಂಡ ಇನ್ನೂ 82 ಎಸೆತಗಳಿರುವಂತೆ ಜಯಗಳಿಸಿತ್ತು. ಇಂದಿನ 81 ಎಸೆತಗಳಿರುವಂತೆ ಜಯಗಳಿಸಿದ ಭಾರತ ತಂಡ ಮೂರನೇ ಸ್ಥಾನದಲ್ಲಿದ್ದು, ನೆದರ್ಲೆಂಡ್ ವಿರುದ್ಧ ಶಾರ್ಜಾದಲ್ಲಿ 77 ಎಸೆತ ಇರುವಂತೆ ಗೆದ್ದ ಶ್ರೀಲಂಕಾ ನಾಲ್ಕನೇ ಸ್ಥಾನದಲ್ಲಿದೆ.

Related Article

ಟಿ20 ವಿಶ್ವಕಪ್: ಸ್ಕಾಟ್ವೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಆಫ್ಘನ್, ನ್ಯೂಜಿಲೆಂಡ್ ಹಿಂದಿಕ್ಕಿದ ಟೀಂ ಇಂಡಿಯಾ

ಟಿ20 ವಿಶ್ವಕಪ್: 7.1 ಓವರ್ ನಲ್ಲಿ ಭಾರತ ಗೆದ್ದರೆ, ಆಫ್ಘನ್, ನ್ಯೂಜಿಲೆಂಡ್ ಅನ್ನು ಹಿಂದಿಕ್ಕಲಿದೆ!

ಟಿ20 ವಿಶ್ವಕಪ್: ಭಾರತೀಯ ಬೌಲರ್ ಗಳ ದಾಳಿಗೆ ತತ್ತರಿಸಿದ ಸ್ಕಾಟ್ಲೆಂಡ್, 85 ರನ್ ಗಳಿಗೆ ಆಲೌಟ್

ವಿಚಿತ್ರ ದಾಖಲೆ ಬರೆದ ವಿರಾಟ್ ಕೊಹ್ಲಿ: 9 ಪಂದ್ಯಗಳಲ್ಲಿ 2 ಬಾರಿ ಟಾಸ್ ವಿನ್

ಟಿ20 ವಿಶ್ವಕಪ್: ನಮೀಬಿಯಾ ವಿರುದ್ಧ ನ್ಯೂಜಿಲೆಂಡ್ ಗೆ ಭರ್ಜರಿ ಜಯ, ಭಾರತದ ಸೆಮೀಸ್ ಕನಸು ಮತ್ತಷ್ಟು ಕಠಿಣ

ಟಿ20 ವಿಶ್ವಕಪ್: ಟಾಸ್ ಗೆದ್ದ ಬರ್ತ್ ಡೇ ಬಾಯ್ ಕೊಹ್ಲಿ, ಭಾರತ ಫೀಲ್ಡಿಂಗ್ ಆಯ್ಕೆ

ಟಿ20 ವಿಶ್ವಕಪ್ ಬಳಿಕ ಎಲ್ಲಾ ಆವೃತ್ತಿಯ ಕ್ರಿಕೆಟ್ ನಿಂದ ವೆಸ್ಟ್ ಇಂಡೀಸ್ ಆಲ್ ರೌಂಡರ್ ಡ್ವೇನ್ ಬ್ರಾವೋ ನಿವೃತ್ತಿ

SCROLL FOR NEXT