ಕೊಹ್ಲಿ-ಸೂರ್ಯಕುಮಾರ್ ಯಾದವ್ 
ಕ್ರಿಕೆಟ್

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಅತಿದೊಡ್ಡ ಗೆಲುವು!

ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತ ತಂಡ ತನ್ನ ಅತೀ ದೊಡ್ಡ ಗೆಲುವು ದಾಖಲಿಸಿದೆ.

ದುಬೈ: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತ ತಂಡ ತನ್ನ ಅತೀ ದೊಡ್ಡ ಗೆಲುವು ದಾಖಲಿಸಿದೆ.

ಹೌದು.. ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ ಕೇವಲ 6.3 ಓವರ್ ನಲ್ಲಿ 2 ವಿಕೆಟ್ ಕಳೆದುಕೊಂಡು 89ರನ್ ಗಳಿಸಿ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿತು. ಆ ಮೂಲಕ ಇನ್ನೂ 81 ಎಸೆತಗಳು ಬಾಕಿ ಇರುವಂತೆಯೇ ಭಾರತ ತಂಡ ಪಂದ್ಯ ಜಯಿಸಿದೆ. 

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಚೇಸಿಂಗ್ ನಲ್ಲಿ ಭಾರತ ತಂಡದ ಪಾಲಿಗೆ ಇದು ಅತೀ ದೊಡ್ಡ ಗೆಲುವಾಗಿದೆ.

ಈ ಹಿಂದೆ ಭಾರತ 2016ರಲ್ಲಿ ಮೀರ್ ಪುರ್ ನಲ್ಲಿ ಯುಎಇ ವಿರುದ್ಧ ಇನ್ನೂ 59 ಎಸೆತಗಳು ಬಾಕಿ ಇರುವಂತೆ ಜಯಿಸಿತ್ತು. ಇದು  ಭಾರತ ತಂಡ ಚೇಸಿಂಗ್ ನಲ್ಲಿ ದಾಖಲಿಸಿದ ಅತೀ ದೊಡ್ಡ ಅಂತರದ ಗೆಲುವಾಗಿತ್ತು. ಆದರೆ ಇಂದಿನ ಪಂದ್ಯದಲ್ಲಿ 81 ಎಸೆತಗಳು ಇರುವಂತೆ ಜಯಿ ಆ ದಾಖಲೆಯನ್ನು ಭಾರತ ಹಿಂದಿಕ್ಕಿದೆ. 

ಮೂರನೇ ಸ್ಥಾನದಲ್ಲಿ 2016ರ ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಪಂದ್ಯವಿದ್ದು, ಆ ಪಂದ್ಯವನ್ನು ಭಾರತ ತಂಡ ಇನ್ನೂ 41 ಎಸೆತ ಇರುವಂತೆ ಜಯಿಸಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT