ಟಿ20 ವಿಶ್ವಕಪ್ ಬಳಿಕ ಎಲ್ಲಾ ಆವೃತ್ತಿಯ ಕ್ರಿಕೆಟ್ ನಿಂದ ವೆಸ್ಟ್ ಇಂಡೀಸ್ ಆಲ್ ರೌಂಡರ್ ಡ್ವೇನ್ ಬ್ರಾವೋ ನಿವೃತ್ತಿ
ವೆಸ್ಟ್ ಇಂಡೀಸ್ ನ ಆಲ್ ರೌಂಡರ್ ಡ್ವೇನ್ ಬ್ರಾವೋ ಟಿ20 ವಿಶ್ವಕಪ್ ಬಳಿಕ ಎಲ್ಲಾ ಆವೃತ್ತಿಯ ಕ್ರಿಕೆಟ್ ನಿಂದಲೂ ನಿವೃತ್ತಿ ಘೋಷಣೆ ಮಾಡಲಿದ್ದಾರೆ.
ಅಬುಧಾಬಿ: ವೆಸ್ಟ್ ಇಂಡೀಸ್ ನ ಆಲ್ ರೌಂಡರ್ ಡ್ವೇನ್ ಬ್ರಾವೋ ಟಿ20 ವಿಶ್ವಕಪ್ ಬಳಿಕ ಎಲ್ಲಾ ಆವೃತ್ತಿಯ ಕ್ರಿಕೆಟ್ ನಿಂದಲೂ ನಿವೃತ್ತಿ ಘೋಷಣೆ ಮಾಡಲಿದ್ದಾರೆ.
ಶ್ರೀಲಂಕಾ ವಿರುದ್ಧದ ಪಂದ್ಯ ಸೋಲುಕಂಡ ಬಳಿಕ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿರುವ ಬ್ರಾವೋ, ಟಿ20 ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ನ ಎಲ್ಲಾ ಆವೃತ್ತಿಗಳಿಗೂ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ.
ಸಮಯ ಬಂದಿದೆ ಎಂದು ನನಗೆ ಅನ್ನಿಸುತ್ತಿದೆ. "ನಾನು ಅತ್ಯುತ್ತಮ ವೃತ್ತಿ ಜೀವನವನ್ನು ಕಂಡಿದ್ದೇನೆ. 18 ವರ್ಷಗಳ ಕಾಲ ವೆಸ್ಟ್ ಇಂಡೀಸ್ ನ್ನು ಪ್ರತಿನಿಧಿಸಿದ್ದಕ್ಕಾಗಿ ಅತ್ಯಂತ ಕೃತಜ್ಞನಾಗಿರುವೆ ಎಂದು ಬ್ರಾವೋ ಹೇಳಿದ್ದಾರೆ.
"ಐಸಿಸಿಯ ಮೂರು ಟ್ರೋಫಿಗಳನ್ನು ಗೆಲ್ಲುವ ಮೂಲಕ ಜಾಗತಿಕ ಮಟ್ಟದಲ್ಲಿ ನಮ್ಮ ಕಾಲಘಟ್ಟದಲ್ಲಿ ಖ್ಯಾತಿ ಗಳಿಸಿರುವುದಕ್ಕೆ ಸಂತಸವಿದೆ" ಎಂದು ಬ್ರಾವೋ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.