ವಿರಾಟ್ ಕೊಹ್ಲಿ 
ಕ್ರಿಕೆಟ್

ಎಂಎಸ್ ಧೋನಿ ಬಳಿಕ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ನಾಯಕ ವಿರಾಟ್ ಕೊಹ್ಲಿ!

ನಮೀಬಿಯಾ ವಿರುದ್ಧ ನಡೆದ ಟಿ20 ವಿಶ್ವಕಪ್ ಪಂದ್ಯದ ಗೆಲುವಿನ ಮೂಲಕ ಟಿ20 ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಅವರ ನಾಯಕತ್ವ ಅಂತ್ಯಗೊಂಡಿದೆ. 

ದುಬೈ: ನಮೀಬಿಯಾ ವಿರುದ್ಧ ನಡೆದ ಟಿ20 ವಿಶ್ವಕಪ್ ಪಂದ್ಯದ ಗೆಲುವಿನ ಮೂಲಕ ಟಿ20 ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಅವರ ನಾಯಕತ್ವ ಅಂತ್ಯಗೊಂಡಿದೆ. 

ಟಿ20 ವಿಶ್ವಕಪ್ ನಲ್ಲಿ ಭಾರತ ಸೆಮಿ ಫೈನಲ್ಸ್ ತಲುವ ಕನಸು ಭಗ್ನಗೊಂಡಿದ್ದರೂ ವಿರಾಟ್ ಕೊಹ್ಲಿ ಅಪರೂಪದ ಸಾಧನೆಯನ್ನು ಮಾಡಿದ್ದಾರೆ. 

2016 ರಲ್ಲಿ ಮಹೇಂದ್ರ ಸಿಂಗ್ ಧೋನಿ ಅವರು ನಾಯಕತ್ವ ಅಂತ್ಯಗೊಂಡಾಗ ಟಿ20 ಆವೃತ್ತಿಯಲ್ಲಿ ಭಾರತ ತಂಡಕ್ಕೆ ಅತಿ ಹೆಚ್ಚು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ಧೋನಿ ಭಾಜನರಾಗಿದ್ದರು. ಈಗ ಆ ಸಾಲಿಗೆ ಕೊಹ್ಲಿ ಸೇರ್ಪಡೆಯಾಗಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಅವರ ಬಳಿಕ ಟಿ20 ಆವೃತ್ತಿಯಲ್ಲಿ ಅತಿ ಯಶಸ್ವಿಯಾದ ನಾಯಕನೆಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

ನಾಯಕತ್ವ ವಹಿಸಿದ್ದ 50 ಪಂದ್ಯಗಳ ಪೈಕಿ 30 ಪಂದ್ಯಗಳಲ್ಲಿ ಭಾರತ ತಂಡ ಗೆದ್ದಿದ್ದು 16 ರಲ್ಲಿ ಸೋತಿದೆ.

ಇನ್ನು ತಂಡದ ನಾಯಕನಾಗಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ವಿಭಾಗದಲ್ಲಿ ಕೊಹ್ಲಿ ಆಸ್ಟ್ರೇಲಿಯಾದ ಆರಾನ್ ಫಿಂಚ್ ಅವರ ನಂತರದ ಸ್ಥಾನದಲ್ಲಿದ್ದಾರೆ. 47 ಇನ್ನಿಂಗ್ಸ್ ನಲ್ಲಿ 13 ಅರ್ಧಶತಕ ದಾಖಲಿಸಿ, 1570 ರನ್ ಗಳನ್ನು ಕೊಹ್ಲಿ ಗಳಿಸಿದ್ದಾರೆ.

ಆದರೆ ಇಷ್ಟೆಲ್ಲ ಯಶಸ್ಸಿನ ನಡುವೆಯೂ ಕೊಹ್ಲಿಯನ್ನು ಒಂದು ಸಂಗತಿ ಮಾತ್ರ ಬಾಧಿಸುತ್ತಿದೆ. ಅದೇನೆಂದರೆ, ತಮ್ಮ ನಾಯಕತ್ವದಲ್ಲಿ ಭಾರತ ಐಸಿಸಿ ಟೈಟಲ್ ಗಳನ್ನು ಗೆದ್ದಿರುವುದು ಕಡಿಮೆ ಎಂಬ ಸಂಗತಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT